ಶನಿವಾರ, ಜನವರಿ 18, 2020
19 °C

ಜೇವರ್ಗಿ: ಸಾಲ ಬಾಧೆ, ರೈತ ವಿಷಕುಡಿದುಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜೇವರ್ಗಿ: ಸಾಲದ ಬಾಧೆಯಿಂದ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ನೆಲೋಗಿ ಪೊಲೀಸ್ ಠಾಣೆಯ ವ್ಯಾಪ್ತಿಯ ಹಿಪ್ಪರಗಾ (ಎಸ್‌ಎನ್) ಗ್ರಾಮದಲ್ಲಿ ನಡೆದಿದೆ.ಮಹ್ಮದ ಹುಸೇನ್ ಬಾಷಾಸಾಬ ಗೊಟಗುಣಕಿ (60) ಅತ್ಮಹತ್ಯೆಗೆ ಶರಣಾದ ರೈತ. ಮೃತನಿಗೆ ಪತ್ನಿ, ಇಬ್ಬರು ಪುತ್ರರು, ಒಬ್ಬ ಪುತ್ರಿ ಇದ್ದಾರೆ. ಎರಡು ಎಕರೆ ಜಮೀನಿನಲ್ಲಿ ಬಿತ್ತನೆ ಮಾಡಿದ ತೊಗರಿ ಹಾಗೂ ಹತ್ತಿ ಬೆಳೆ ಮಳೆ ಪ್ರಮಾಣ ಕಡಿಮೆಯಾಗಿದ್ದರಿಂದ ಬೆಳೆಹಾನಿಯಾಗಿದ್ದರಿಂದ ಮಹ್ಮದ ಹುಸೇನ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.ಸಾಲದ ಬಾಧೆಯಿಂದ ತೀವ್ರ ಮನನೊಂದಿದ್ದರಿಂದ ಸೋಮವಾರ ರಾತ್ರಿ ತನ್ನ ಸ್ವಂತ ಜಮೀನಿನಲ್ಲಿ ವಿಷ ಸೇವಿಸಿದ್ದಾಗಿ ಎಂದು ತಿಳಿದುಬಂದಿದೆ. ವಿಷಯ ಅರಿತ ಗ್ರಾಮಸ್ಥರು ಅವರನ್ನು ಕೂಡಲೇ ಜಿಲ್ಲಾ ಆಸ್ಪತ್ರೆಗೆ ಸಾಗಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ರಾತ್ರಿ ಮೃತಪಟ್ಟರು.ಘಟನೆಗೆ ಸಂಬಂಧಿಸಿದಂತೆ ಬುಧವಾರ ಬೆಳಿಗ್ಗೆ ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ಪುತ್ರ ಬಾಬು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಮೃತರಿಗೆ ಬ್ಯಾಂಕ್‌ನಲ್ಲಿ ಯಾವುದೇ ಸಾಲವಿರಲಿಲ್ಲ. ಖಾಸಗಿ ಸಾಲವಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಘಟನಾ ಸ್ಥಳಕ್ಕೆ ನೆಲೋಗಿ ಸಬ್ ಇನ್‌ಸ್ಪೆಕ್ಟರ್ ರಾಮಕಿಶನ್ ಬರ್ವೆ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ. ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು                  ತಿಳಿಸಿದ್ದಾರೆ.ಈ ವಿಷಯವಾಗಿ ತಹಶೀಲ್ದಾರ್ ಡಿ.ವೈ.ಪಾಟೀಲ ಅವರನ್ನು ಸಂಪರ್ಕಿಸಿದಾಗ ಈ ಬಗ್ಗೆ ತಮಗೆ ಯಾವುದೇ ಮಾಹಿತಿ ಇದುವರೆಗೂ ಬಂದಿಲ್ಲ. ಮಾಹಿತಿ ಬಂದ ನಂತರ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು `ಪ್ರಜಾವಾಣಿ~ಗೆ ತಿಳಿಸಿದರು.

ಪ್ರತಿಕ್ರಿಯಿಸಿ (+)