ಬುಧವಾರ, ಜನವರಿ 29, 2020
28 °C

371 ಕಲಂ ತಿದ್ದುಪಡಿ ಶೀಘ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಸಂವಿಧಾನದ 371ನೇ ಕಲಂ ತಿದ್ದುಪಡಿಯಾಗಬೇಕು ಎಂಬ ಬಹು ದಿನದ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸಿದ್ದು ಆದಷ್ಟು ಬೇಗನೆ ಈ ಭಾಗದ ಬೇಡಿಕೆ ಈಡೇರಲಿದೆ ಎಂದು ಖ್ಯಾತ ಉದ್ಯಮಿ ಎಸ್.ಎಸ್. ಪಾಟೀಲ ತಿಳಿಸಿದರು.ನಗರದ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ತಾಲ್ಲೂಕಿನ ಶ್ರೀನಿವಾಸ ಸರಡಗಿ ಮಠದ ಲಿಂಗೈಕ್ಯ ಚಿಕ್ಕವೀರೇಶ್ವರ ಶಿವಾಚಾರ್ಯರ 65ನೇ ಸ್ಮರಣೋತ್ಸವ ಅಂಗವಾಗಿ ಶುಕ್ರವಾರ ಜರುಗಿದ ಹೈದರಾಬಾದ್ ಕರ್ನಾಟಕ ಚಿಂತನಾ ಸಮಾವೇಶ ಹಾಗೂ ಚಿನ್ನದ ಕಂತಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಗುರುವಾರ ದೆಹಲಿಯಲ್ಲಿ ಪ್ರಧಾನಿಯೊಂದಿಗೆ ಈ ಕುರಿತು ಚರ್ಚಿಸಿದಾಗ ಆದಷ್ಟು ಶೀಘ್ರದಲ್ಲಿಯೇ ಈ ಬೇಡಿಕೆ ಈಡೇರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು. ಕೇಂದ್ರ ಸರ್ಕಾರದ ಈ ದಿಟ್ಟ ನಿರ್ಧಾರದಿಂದಾಗಿ ಹಿಂದುಳಿದ ಹೈದರಾಬಾದ್ ಕರ್ನಾಟಕ ಪ್ರದೇಶದ ಸರ್ವಾಂಗೀಣ ಏಳಿಗೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.ಇದೇ ಸಂದರ್ಭದಲ್ಲಿ ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ ಖೇಣಿ ಅವರಿಗೆ ಚಿನ್ನದ ಕಂತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.ಬಸವರಾಜ ಭೀಮಳ್ಳಿ, ಉಮಾಕಾಂತ ನಿಗ್ಗುಡಗಿ ಗೋಪಾಲಕೃಷ್ಣ ರಘೋಜಿ, ಅಮರನಾಥ ಪಾಟೀಲ, ಲಕ್ಷ್ಮಣ ದಸ್ತಿ ವೇದಿಕೆಯಲ್ಲಿದ್ದರು. ರೇವಣಸಿದ್ಧ ಶಿವಾಚಾರ್ಯ ಸಾನ್ನಿಧ್ಯ ವಹಿಸಿದ್ದರು.ನಾಗಲಿಂಗಯ್ಯ ಮಠಪತಿ ಕಾರ್ಯಕ್ರಮ ನಿರೂಪಿಸಿದರು. ಶಿವಕವಿ ಜೋಗೂರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

 

ಪ್ರತಿಕ್ರಿಯಿಸಿ (+)