ಗುರುವಾರ , ಮೇ 19, 2022
21 °C

ಪೌರಕಾರ್ಮಿಕರ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಗುಲ್ಬರ್ಗ ಮಹಾನಗರ ಪಾಲಿಕೆಯು ಬಾಕಿ ವೇತನವನ್ನು ಕೂಡಲೇ ಪಾವತಿಸಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿದರು. ಧರಣಿ ನಿರತ ಬಹುತೇಕ ಮಹಿಳೆಯರು ತಮ್ಮ ವೇತನ ಪಾವತಿ ಬಾಕಿ ಮತ್ತು ಬಳಿಕ ಕೆಲಸ ನೀಡದ ಬಗ್ಗೆ ಮಾತನಾಡುತ್ತಾ ಕಣ್ಣೀರಿಟ್ಟರು. ಗುಲ್ಬರ್ಗದ ನೈರ್ಮಲೀಕರಣ ಕೆಲಸ ಮಾಡುತ್ತಿದ್ದ 470 ಪೌರಕಾರ್ಮಿಕರ 2007 ಜೂನ್‌ನಿಂದ 35 ತಿಂಗಳ ವೇತನ ಪಾವತಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಶೇ 6ರ ಬಡ್ಡಿದರದಲ್ಲಿ 30 ದಿನಗಳ ಒಳಗೆ ಹಣ ನೀಡಬೇಕು. ಇಲ್ಲದೇ ಇದ್ದಲ್ಲಿ ಬಡ್ಡಿ ಸಹಿತ ವಸೂಲಿ ಮಾಡಲಾಗುವುದು ಎಂದು ಕಾರ್ಮಿಕ ಇಲಾಖೆ ಆಯುಕ್ತರ ಕಾರ್ಯಾಲದಿಂದ ಆದೇಶಿಸಲಾಗಿತ್ತು. ಆದರೆ ಪಾಲಿಕೆ ಆಯುಕ್ತರು ಈ ತನಕವೂ ಹಣ ಪಾವತಿಸಿಲ್ಲ. ಈ ಹಿನ್ನೆಲೆಯಲ್ಲಿವೇತನ ಪಾವತಿ ಕಾಯಿದೆಯಡಿ ಮಹಾನಗರ ಪಾಲಿಕೆಯಿಂದ 9.05 ಕೋಟಿ ರೂಪಾಯಿಯನ್ನು ಬಡ್ಡಿ ಸಹಿತ ಭೂ ಕಂದಾಯ ಬಾಕಿ ಎಂದು ವಸೂಲಿ ಮಾಡಲು ಜಿಲ್ಲಾಧಿಕಾರಿ ಅವರಿಗೆ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿ ಫೆ.10ರಂದು ಪತ್ರ ಬರೆದಿದೆ ಎಂದು ಧರಣಿ ನಿರತರು ಹೇಳಿದರು.ಈ ಹಿನ್ನೆಲೆಯಲ್ಲಿ ತಕ್ಷಣ ವಸೂಲು ಮಾಡಿ ಹಣ ಪಾವತಿಸಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿದರು. ಹಣವಿಲ್ಲದೇ, ಸಂಕಷ್ಟಗಳನ್ನು ಹೇಳಿಕೊಂಡ ಮಹಿಳೆಯರು ಈ ಸಂದರ್ಭದಲ್ಲಿ ಕಣ್ಣೀರಿಟ್ಟ ಘಟನ ನಡೆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.