ಗುರುವಾರ , ಜೂನ್ 24, 2021
29 °C

ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಜೇವರ್ಗಿ ತಾಲ್ಲೂಕಿನ ಕೆಲ್ಲೂರು ಗ್ರಾಮದ ಬಳಿ ಇರುವ ಬಾಲಕಿಯರ ಹಾಗೂ ವಸತಿ ನಿಲಯದ ಮೇಲ್ವಿಚಾರಕಿ ಕೆಲಸ ನಿರ್ವಹಿಸುತ್ತಿದ್ದ ಕವಿತಾ ಕೊಲೆ ಪ್ರಕರಣದ ತನಿಖೆಯನ್ನು ಸಿ.ಒ.ಡಿ ತನಿಖೆಗೆ ಒಪ್ಪಿಸಲು ಆಗ್ರಹಿಸಿ ವೀರ ಕನ್ನಡಿಗರ ಸೇನೆ ಸೋಮವಾರ ಪ್ರತಿಭಟನೆ ನಡೆಸಿತು.ಸೇನೆ ಪದಾಧಿಕಾರಿಗಳು ಅಧ್ಯಕ್ಷ ಅಮೃತ ಪಾಟೀಲ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತನಿಖೆಯಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಿದ್ದಾರೆ.ಪ್ರಕರಣವನ್ನು ಮುಚ್ಚಿಹಾಕಲು ಸಹಕರಿಸಿದ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಅವರನ್ನು ಶಾಸಕ ಸ್ಥಾನದಿಂದ ಕೈ ಬಿಡಬೇಕು, ಕವಿತಾ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಬೇಕು. ವಿಳಂಬ ನೀತಿ ಅನುಸರಿಸಿದರೆ ಶಾಸಕರ ಮನೆಯ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಸಿದರು.

ಸೇನೆಯ ಗೌರವ ಅಧ್ಯಕ್ಷ ಜಗನ್ನಾಥ ಸೂರ್ಯವಂಶಿ, ಜಿಲ್ಲಾ ಸಂಚಾಲಕ ರಾಜು ಕಣ್ಣೂರು, ಸಂಘಟನಾ ಕಾರ್ಯದರ್ಶಿ ಮಿಲಿಂದ ದೂಳೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.