ಸೋಮವಾರ, ಜೂನ್ 14, 2021
27 °C

ಆಶ್ರಯಕ್ಕೆ ಆಗ್ರಹಿಸಿ ಪ್ರತಿಭಟನೆ

`ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಶೋಷಿತ ಸಮುದಾಯದ ಜನರಿಗೆ ಮನೆ ಮಂಜೂರು ಮಾಡಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಕರ್ನಾಟಕ ದಲಿತ ಸರ್ವೋದಯ ಸಮಿತಿ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು.ಸೂರುರಹಿತ ಜನತೆಗೆ ಆಶ್ರಯ ಮನೆಗಳನ್ನು ವಿತರಿಸುವಂತೆ ಸಮಿತಿಯು ಹಲವು ಸಲ ಪ್ರತಿಭಟನೆ ನಡೆಸಿದೆ. ಬೆಂಗಳೂರು ಚಲೋ ಹಮ್ಮಿಕೊಂಡು ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಗಮನಕ್ಕೂ ಈ ವಿಷಯ ತರಲಾಗಿದೆ. ಆದರೂ ಈತನಕ ಪಾಲಿಕೆಯು ಮನೆ ಮಂಜೂರಿಗೆ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.2011ರ ಸಾಲಿನಿಂದ ಜಾರಿಗೆ ಬಂದಿರುವ ವಾಜಪೇಯಿ ನಗರ ನಿವೇಶನ ಯೋಜನೆಯ ಅಡಿಯಲ್ಲಿ ಜಮೀನು ಖರೀದಿಸಲು ಮಾರ್ಗಸೂಚಿ ದರದ ಮೂರು ಪಟ್ಟು ಬೆಲೆಗೆ ಖರೀದಿಸಲು ಅವಕಾಶ ಮಾಡಿಕೊಡಲಾಗಿದೆ.ಇದರ ಅನ್ವಯ ರಾಜ್ಯ ಸರ್ಕಾರದ ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮದ ಪ್ರಧಾನ ವ್ಯವಸ್ಥಾಪಕರು ಪಾಲಿಕೆಗೆ ಪತ್ರ ಬರೆದು, 12,000 ಮನೆಗಳನ್ನು ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ ಮಂಜೂರು ಮಾಡಲು ಸೂಚಿಸಿದ್ದಾರೆ. ಇಷ್ಟೆಲ್ಲ ನಿರ್ದೇಶನಗಳ ಬಳಿಕವೂ ಈವರೆಗೆ ಮನೆಗಳನ್ನು ವಿತರಿಸಿಲ್ಲ ಎಂದು ಪ್ರತಿಭಟನಾಕಾರರು ಆಕ್ಷೇಪ ವ್ಯಕ್ತಪಡಿಸಿದರು.ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಜಿಲ್ಲೆಯ ಉತ್ತರ, ದಕ್ಷಿಣ ಹಾಗೂ ಗ್ರಾಮೀಣ ವಿಧಾನಸಭೆ ಕ್ಷೇತ್ರದ ಫಲಾನುಭವಿಗಳ ಪಟ್ಟಿಯನ್ನು ಅಂಕಿ-ಅಂಶದ ಜತೆಗೆ ನೀಡಿದ್ದರೂ ಸರ್ಕಾರ ಮನೆ ವಿತರಣೆಗೆ ಕ್ರಮ ಜರುಗಿಸುತ್ತಿಲ್ಲ ಎಂದು ಅವರು ಆರೋಪಿಸಿದರು.ಇನ್ನು ಹತ್ತು ದಿನಗಳ ಒಳಗೆ ಮನೆ ವಿತರಣೆ ಪ್ರಕ್ರಿಯೆಗೆ ಚಾಲನೆ ನೀಡದೇ ಹೋದರೆ, ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ಕುರಿತು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಸಮಿತಿಯ ಮುಖಂಡರಾದ ವಿ.ಎಚ್.ವಾಲೀಕಾರ, ಅಶೋಕ ಪಾಟೀಲ ಇತರರು ನೇತೃತ್ವ ವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.