ಭಾನುವಾರ, ಜೂನ್ 20, 2021
23 °C

ಶಾಸಕರ ಹಸ್ತಕ್ಷೇಪ: ಪ್ಯಾಟಿ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳನ್ನು ರಚಿಸಿಕೊಂಡಿದ್ದು, ಇದರಲ್ಲಿ ಸಂಬಂಧಿಸಿದ ಆಯಾ ವ್ಯಕ್ತಿಗಳೇ ಅಧಿಕಾರ ಚಲಾಯಿಸಿ ತಮಗೆ ಬೇಕಾದ ವ್ಯವಸ್ಥೆ ಕಲ್ಪಿಸಲಾಗಿದೆ.ಆದರೆ ಆಳಂದ ಕ್ಷೇತ್ರದ ಶಾಸಕ ಸುಭಾಷ ಗುತ್ತೇದಾರ ಅವರು ಈ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ಅರ್ಹ ಫಲಾನುಭವಿಗಳಿಗೆ ಸರ್ಕಾರದಿಂದ ಸಿಗುವ  ಸೌಲಭ್ಯಗಳನ್ನು ಕಸಿದುಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಸಿದ್ದರಾಮ ಪ್ಯಾಟಿ ಆರೋಪಿಸಿದರು.ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಸವ, ಇಂದಿರಾ, ಗುಡಿಸಲು ಮುಂತಾದ ಯೋಜನೆಗಳಲ್ಲಿ ಕಡು ಬಡವರಿಗೆ ಸಿಗುವ ಮನೆಗಳನ್ನು ಗ್ರಾಮಸಭೆ ನಡೆಸುವ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು ಎಂಬ ನಿಯಮವಿದೆ. ಆದರೂ ಗ್ರಾಮ ಪಂಚಾಯಿತಿ ಅಧ್ಯಕ್ಷ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಮೇಲೆ ಒತ್ತಡ ತಂದು ತಾವೇ ಪಟ್ಟಿಯನ್ನು ತಯಾರಿಸಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.ಫಲಾನುಭವಿಗಳ ಆಯ್ಕೆಯಲ್ಲಿ ಅನ್ಯಾಯವಾಗಿದೆ ಎಂದು ಈ ಬಗ್ಗೆ ತನಿಖೆ ಮಾಡಿ ನಿಜ ಫಲಾನುಭವಿಗಳಿಗೆ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಬಿ.ಆರ್. ಪಾಟೀಲ ನೇತೃತ್ವದಲ್ಲಿ ಈಗಾಗಲೇ ಅನೇಕ ಬಾರಿ ಹೋರಾಟ ಮಾಡಲಾಗಿದೆ. ಆಳಂದ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಲಾಗಿದ್ದರೂ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಇನ್ನೂ ತನಿಖೆ ಹಂತದಲ್ಲಿದೆ ಎಂದು ಪ್ರಕರಣವನ್ನು ಮುಂದೂಡುತ್ತಿದ್ದಾರೆ. ಮಾರ್ಚ್ ತಿಂಗಳೊಳಗೆ ಸೂಕ್ತ ತನಿಖೆ ಮಾಡದಿದ್ದಲ್ಲಿ  ಏಪ್ರಿಲ್ ತಿಂಗಳಿನಿಂದ ಮತ್ತೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.