ಶುಕ್ರವಾರ, ಮೇ 7, 2021
26 °C

ಲಾರಿ ಹಾಯ್ದು 2 ಸಾವು; 3 ಮಂದಿ ಗಂಭೀರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಳಂದ: ಕಿರುಸೇತುವೆ ಮೇಲೆ ಕುಳಿತಿದ್ದ ಜನರ ಮೇಲೆ ಲಾರಿ ಹರಿದು ಇಬ್ಬರು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.ತಾಲ್ಲೂಕಿನ ಸಾವಳೇಶ್ವರ ಗ್ರಾಮದ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಗ್ರಾಮಸ್ಥರ ಪೈಕಿ ಕೆಲವರು ಸಾವಳೇಶ್ವರ ಕ್ರಾಸ್ ಬಳಿ ಕಿರುಸೇತುವೆ ಮೇಲೆ ವಿರಾಮಕ್ಕೆಂದು ಕುಳಿತಿದ್ದರು. ಈ ಸಮಯದಲ್ಲಿ ಲಾರಿಯೊಂದು ಎದುರಿನಿಂದ ಬರುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿ ಜನರ ಮೇಲೆ ನುಗ್ಗಿತು. ಈ ಘಟನೆಯಲ್ಲಿ ತುಕಾರಾಮ ಶೀಲವಂತ (55) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದರೆ,  ಶಿವಶರಣಪ್ಪ ಸಿಂಗೆ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟ. ಉಳಿದಂತೆ ಚಂದ್ರಕಾಂತ ಮರಾಠಾ, ಶಿವರಾಯ ಹೊಸಮನಿ, ಸಿದ್ಧರಾಮ ಗೌಳಿ ಗಂಭೀರವಾಗಿ ಗಾಯಗೊಂಡಿದ್ದು, ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಎಲ್ಲರನ್ನೂ ಆಳಂದದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಡಿಎಸ್‌ಪಿ ಎಸ್.ಬಿ.ಸಾಂಬಾ, ಸಿಪಿಐ ಜಿ.ಎಸ್.ಉಡಗಿ ಭೇಟಿ ನೀಡಿ ಪರಿಶೀಲಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.