ಭಾನುವಾರ, ಮೇ 9, 2021
18 °C

ನಾಳೆ ಉಚಿತ ತರಬೇತಿ ಕಾರ್ಯಾಗಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಯೂನಿವರ್ಸಲ್ ತರಬೇತಿ ಕೇಂದ್ರದ ವತಿಯಿಂದ ಏಪ್ರಿಲ್ 17ರಂದು ಬೆಳಿಗ್ಗೆ 10ಕ್ಕೆ ಸಮಾಜಶಾಸ್ತ್ರ ವಿಷಯದ ಕುರಿತು ಉಚಿತ ತರಬೇತಿ ಕಾರ್ಯಾಗಾರವನ್ನು ಹೈದರಾಬಾದ್ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದೆ ಎಂದು ತರಬೇತಿ ಕೇಂದ್ರದ ವ್ಯವಸ್ಥಾಪಕಿ ರಶ್ಮಿ ಸಂತೋಷ ತಿಳಿಸಿದ್ದಾರೆ. ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 1764 ಉಪನ್ಯಾಸಕರು ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಈ ಹಿನ್ನಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.ತರಬೇತಿ ಕಾರ್ಯಾಗಾರಕ್ಕೆ 2009ರ ಉಪನ್ಯಾಸಕರ ನೇಮಕಾತಿ ಪರೀಕ್ಷೆಯಲ್ಲಿ ರಾಜ್ಯಕ್ಕೆ  ಪ್ರಥಮ ರ‌್ಯಾಂಕ್ ಪಡೆದ ಗಣೇಶ ನಾಯಕ ಅವರಿಂದ ಪರೀಕ್ಷೆಯಲ್ಲಿ ಹೇಗೆ ಯಶಸ್ಸುಗಳಿಸಬಹುದು ಎಂಬುದರ ಕುರಿತು ಕಾರ್ಯಾಗಾರದಲ್ಲಿ ಮಾಹಿತಿ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಯೂನಿವರ್ಸಲ್ ಕೊಚಿಂಗ್ ಸೆಂಟರ್, ಸುಪರ್ ಮಾರ್ಕೇಟ್ ಮುಖ್ಯ ರಸ್ತೆ, ವಾದಿರಾಜ ಭವನ ಹಿಂದುಗಡೆ, ಸಿದ್ದಲಿಂಗೇಶ್ವರ ಬುಕ್ ಡಿಪೋ ಹತ್ತಿರ ಗುಲ್ಬರ್ಗ, ಮೊ: 99165-99569, 9964860131 ಗೆ ಸಂಪರ್ಕಿಸಬಹುದು.ಇಂದು ನಗರಕ್ಕೆ ಆಸ್ಕರ್ಗುಲ್ಬರ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ ಆವರಣದಲ್ಲಿ ಏಪ್ರಿಲ್ 16ರಂದು 12.30ಕ್ಕೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫರ್ನಾಂಡಿಸ್ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ.

ಇಂದು ಉಪವಾಸ ಸತ್ಯಾಗ್ರಹಗುಲ್ಬರ್ಗ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ದಾದಾ ಸಾಹೇಬ್ ಎನ್. ಮೂರ್ತಿ ಸ್ಥಾಪಿತ) ಜಿಲ್ಲಾ ವಿದ್ಯಾರ್ಥಿ ಒಕ್ಕೂಟ ವತಿಯಿಂದ ಅಂಗವಿಕಲ, ವಿಧವಾ, ವೃದ್ಧಾಪ್ಯ ವೇತನ ಪುನಃ ಆರಂಭಿಸಬೇಕು ಎಂದು ಒತ್ತಾಯಿಸಿ 26ದಿನಗಳಿಂದ ನಡೆದ ಸತ್ಯಾಗ್ರಹಕ್ಕೆ ಜಿಲ್ಲಾ ಆಡಳಿತದ ಜನ ವಿರೋಧಿ ಧೋರಣೆಯ ವಿರುದ್ಧ ಏ. 16 ರಂದು ಆಮರಣ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ನಾಗಪ್ಪ ಆರ್. ಟೈಗರ್ ತಿಳಿಸಿದ್ದಾರೆ.ಅನರ್ಹರಿಗೆ ವಸತಿ ಯೋಜನೆ: ನಿಗಮಕ್ಕೆ ದೂರುಗುಲ್ಬರ್ಗ: ತಾಲ್ಲೂಕಿನ ಗ್ರಾಮೀಣ ಮತಕ್ಷೇತ್ರದಲ್ಲಿ 2010-11 ಮತ್ತು 2011-12ನೇ ಸಾಲಿನ ಬಸವ ವಸತಿ ಯೋಜನೆ ಅಡಿಯಲ್ಲಿ ಆಯ್ಕೆ ಮಾಡಿರುವ ಫಲಾನುಭವಿಗಳ ಪಟ್ಟಿಯಲ್ಲಿ ಅವ್ಯವಹಾರ ನಡೆದಿದ್ದು, ಕೂಡಲೇ ಈ ಪಟ್ಟಿಯನ್ನು ರದ್ದುಗೊಳಿಸಬೇಕು ಎಂದು ಕರ್ನಾಟಕ ಯುವಶಕ್ತಿ ಸೈನ್ಯವು ರಾಜೀವ ಗಾಂಧಿ ವಸತಿ ನಿಗಮ ನಿಯಮಿತ ಬೆಂಗಳೂರು ಕಚೇರಿಗೆ ದೂರು ಸಲ್ಲಿಸಿದ್ದಾರೆ.ಅಕ್ಟೋಬರ್ 31, 2011ರಲ್ಲಿ ನಡೆದ ಜಾಗೃತಿ ಸಭೆಯಲ್ಲಿ ಫಲಾನುಭವಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಇದಕ್ಕೆ ತಕರಾರು ಮಾಡಿದ ತಾಲ್ಲೂಕಾ ಪಂಚಾಯಿತಿ ಅಧಿಕಾರಿಯನ್ನು ಬೇರೆಕಡೆಗೆ ವರ್ಗಾವಣೆಗೊಳಿಸಲಾಯಿತು. ಗ್ರಾಮಸಭೆಗಳ ಮೂಲಕ ಆಯ್ಕೆ ಮಾಡಬೇಕಿದ್ದ ಫಲಾನುಭವಿಗಳ ಪಟ್ಟಿಯನ್ನು ಐವಾನ್ ಎ ಶಾಹಿಯಲ್ಲಿ ಕುಳಿತು ನಿರ್ಧರಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.