ಬುಧವಾರ, ಮೇ 12, 2021
17 °C

ಶಿಕ್ಷಕರು: 964 ಹುದ್ದೆಗಳಿಗೆ ನೇಮಕಾತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಸಾರ್ವಜನಿಕ ಶಿಕ್ಷಣ ಇಲಾಖೆಯ ಗುಲ್ಬರ್ಗ ವಿಭಾಗದ ಆರು ಜಿಲ್ಲೆಗಳಲ್ಲಿ ಖಾಲಿ ಇರುವ ಸರ್ಕಾರಿ ಪ್ರೌಢ ಶಾಲೆ, ಆದರ್ಶ ವಿದ್ಯಾಲಯ ಮತ್ತು ಆರ್.ಎಂ.ಎಸ್.ಎ ಅಡಿಯಲ್ಲಿ ಉನ್ನತೀಕರಿಸಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿನ ಪ್ರೌಢ ಶಾಲಾ ಸಹಾಯಕ ಶಿಕ್ಷಕರು ಗ್ರೇಡ್-2 ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ವೃಂದದ ಹುದ್ದೆಗಳಿಗೆ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಹಾಗೂ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಿದೆ.ಆಸಕ್ತರು ಅಂತರ್ಜಾಲದಲ್ಲಿ ಇಲಾಖೆಯ ಅಧಿಕೃತ ವೆಬ್‌ಸೈಟ್ (http://schooleducation.kar.nic.in) ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ದೊರೆಯುವ ಗಣಕೀಕೃತ ಸಂಖ್ಯೆಯನ್ನು ಕಡ್ಡಾಯವಾಗಿ ಬರೆದಿಟ್ಟುಕೊಳ್ಳಬೇಕು. ಇದು ನೇಮಕಾತಿ ಪ್ರಕ್ರಿಯೆಯ ಎಲ್ಲ ಹಂತದಲ್ಲೂ ಬೇಕಾಗುತ್ತದೆ. ಅರ್ಜಿಯನ್ನು ಏಪ್ರಿಲ್ 16ರಿಂದ ಮೇ 16ರ ಒಳಗೆ ನಿಗದಿತ ಅವಧಿಯಲ್ಲಿ ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬೇಕು.ಗುಲ್ಬರ್ಗ ವಿಭಾಗದಲ್ಲಿ ವಿವಿಧ ವಿಷಯ ಹಾಗೂ ಮಾಧ್ಯಮ ಪ್ರೌಢ ಶಾಲಾ ಸಹಾಯಕ ಶಿಕ್ಷಕ ಗ್ರೇಡ್-2 ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಗ್ರೇಡ್-1 ವೃಂದದ ಒಟ್ಟು 964 ಹುದ್ದೆಗಳಿಗೆ ನೇಮಕಾತಿ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಪತ್ರದ ವಿಶೇಷ ಪತ್ರಿಕೆಯ ಭಾಗ-5 ದಿನಾಂಕ 2 ಏಪ್ರಿಲ್ 2012ರಲ್ಲಿ ಪ್ರಕಟಿಸಲಾದ ನೇಮಕಾತಿ ಅಧಿಸೂಚನೆಯನ್ನು ಅವಲೋಕಿಸಬಹುದು.ಸದರಿ ಅಧಿಸೂಚನೆಯನ್ನು ವಿಭಾಗದ ಎಲ್ಲ ಜಿಲ್ಲಾ ಉಪ ನಿರ್ದೇಶಕರು (ಆಡಳಿತ) ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಕೆಯ ಆಯ್ಕೆ ಪ್ರಾಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ಪದನಿಮಿತ್ತ ಸಹನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.