ಗುರುವಾರ , ಮೇ 6, 2021
27 °C

ಗುಲ್ಬರ್ಗ: ದಸಂಸ ಉಪವಾಸ ಅಂತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ದಾದಾ ಸಾಹೇಬ ಎನ್.ಮೂರ್ತಿ ಸ್ಥಾಪಿತ) ಕಾರ್ಯಕರ್ತರು ಗುಲ್ಬರ್ಗ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿದ್ದ ಆಮರಣಾಂತ ಉಪವಾಸವನ್ನು ಬುಧವಾರ ಅಂತ್ಯಗೊಳಿಸಿದರು.ಇದೇ ಸಂದರ್ಭದಲ್ಲಿ  ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾದೇಶಿಕ ಆಯುಕ್ತರಿಗೆ ಹಾಗೂ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಮನವಿಗೆ ಸೂಕ್ತರೀತಿಯಲ್ಲಿ ಸ್ಪಂದಿಸುವುದಾಗಿ ಭರವಸೆ ನೀಡಲಾಗಿದೆ ಎಂದು ಸಂಘಟನೆಯ ವಿಭಾಗೀಯ ಉಪಾಧ್ಯಕ್ಷ ರಾಮಸ್ವಾಮಿ ಮಾಸ್ಟರ ತಿಳಿಸಿದ್ದಾರೆ.ಸರ್ಕಾರದಿಂದ ದುರ್ಬಲರು, ಹಿರಿಯ ನಾಗರಿಕರು, ವಿಧವೆಯರು, ಅನಾಥರಿಗೆ ನೀಡುವ ಸೌಲಭ್ಯವನ್ನು ಅನರ್ಹರು ಪಡೆಯುತ್ತಿದ್ದಾರೆ ಎಂಬ ನೆಪದಲ್ಲಿ ಅರ್ಹರಿಗೆ ನೀಡುತ್ತಿದ್ದ ಸೌಲಭ್ಯವನ್ನೂ ರದ್ದು ಮಾಡಿರುವುದನ್ನು ಪ್ರತಿಭಟಿಸಿ ಸಂಘಟನೆ ಧರಣಿ, ಉಪವಾಸ ನಡೆಸಿತ್ತು.ಆದರೆ ಧರಣಿ ನಿರತರನ್ನು ಭೇಟಿ ಮಾಡಿ ಅಹವಾಲು ಆಲಿಸುವ ಕನಿಷ್ಠ ಸೌಜನ್ಯವನ್ನೂ ಅಧಿಕಾರಿಗಳು ತೋರಿಲ್ಲ ಎಂದು ಅವರು ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸಂಘಟನಾ ಕಾರ್ಯದರ್ಶಿ ಶಿವಜಾತ ಎಂ. ಕೋರಬಾ, ಕೂಲಿ ಕಾರ್ಮಿಕ ಸಂಘಟನೆಯ ಅಧ್ಯಕ್ಷ ಅಶೋಕ ಎಲ್. ಮುಂತಾದವರು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.