ಶನಿವಾರ, ಮೇ 15, 2021
26 °C

ಆಳಂದ: ಅಧಿಕಾರಿಗಳಿಂದ ಮಾಹಿತಿ ಸಂಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಳಂದ: ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಬರಗಾಲ ಕಾಮಗಾರಿ ನೊಡಲ್ ಅಧಿಕಾರಿ ನೇತೃತ್ವದಲ್ಲಿ ಅಧಿಕಾರಿಗಳು ಭೇಟಿ ನೀಡಿ ಕುಡಿಯುವ ನೀರಿನ ಮತ್ತು ವಿದ್ಯುತ್ ಸಮಸ್ಯೆಗಳ ಕುರಿತ ಮಾಹಿತಿ ಪಡೆದರು.ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆಗಿರುವ ರಾಜ್ಯ ಸರ್ಕಾರದ ಇಂಧನ ಖಾತೆ ಪ್ರಧಾನ ಕಾರ್ಯದರ್ಶಿ ರವಿಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎಂ.ಜಿ. ವಿಜಯಕುಮಾರ ಮತ್ತಿತರ ತಾಲ್ಲೂಕು ಮಟ್ಟದ ಅಧಿಕಾರಿಗಳು ಗುರುವಾರ ಗಡಿಭಾಗದ ಹೊದಲೂರ, ಖಜೂರಿ ಮತ್ತು ಧುತ್ತರಗಾಂವ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದರು.ಕುಡಿಯುವ ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆ ಮತ್ತು ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಗಳ ಅಡಿಯಲ್ಲಿ ನಡೆದ ವಿವಿಧ ಕಾಮಗಾರಿಗಳು ವೀಕ್ಷಿಸಿದರು.ಅಂತರ್ಜಲದ ಕುಸಿತದಿಂದ ಕುಡಿವ ನೀರಿನ ಸಮಸ್ಯೆ ಎದುರಾಗಿದ್ದು, ಸರ್ಕಾರ ಈ ನಿಟ್ಟಿನಲ್ಲಿ ಸಮಸ್ಯೆಗೆ ಪರಿಹಾರ ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯಿತಿ ಮಟ್ಟದಿಂದ ಅನುಷ್ಠಾನಗೊಳಿಸಲು ಪ್ರಯತ್ನಿಸಿದೆ. ಗ್ರಾಮೀಣ ಭಾಗದಲ್ಲಿ 8 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಪೂರೈಸಲಾಗುವುದು ಎಂದು ರವಿಕುಮಾರ ತಿಳಿಸಿದರು.ತಹಸೀಲ್ದಾರ ಇಲ್‌ಯಾಸ್ ಅಹ್ಮದ ಇಸಾಮದಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಅಬ್ದುಲ ಸಲಾಂ, ಪಶು ವೈದ್ಯಾಧಿಕಾರಿ ಸಂಜಯ ರೆಡ್ಡಿ, ಎಇಇ ಶಾಂತಪ್ಪ ಟಕ್ಕಳಕಿ, ಖಜೂರಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅರ್ಚನಾ ಢಗೆ, ಉಪಾಧ್ಯಕ್ಷ ರಾಜಶೇಖರ ಹರಿಹರ, ಧುತ್ತರಗಾಂವದಲ್ಲಿ ಅಧ್ಯಕ್ಷೆ ಶ್ರೀದೇವಿ ಹೊನ್ನಶೆಟ್ಟಿ, ಹೊದಲೂರ ಗ್ರಾಮ ಪಂಚಾಯಿತಿ ಅಧ್ಯಕ್ಷ ಗುರುನಾಥ ಅಡತೆ, ಸದಸ್ಯ ಬನ್ಸಿಲಾಲ ಬಿರಾದಾರ ಇತರ ಅಧಿಕಾರಿಗಳು ಪಾಲ್ಗೊಂಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.