ಗುರುವಾರ , ಜೂಲೈ 2, 2020
23 °C

ಅಭಿವೃದ್ಧಿಗೆ ಶ್ರಮಿಸಲು ಖರ್ಗೆ ಕರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಭಿವೃದ್ಧಿಗೆ ಶ್ರಮಿಸಲು ಖರ್ಗೆ ಕರೆ

ಗುಲ್ಬರ್ಗ: ಖಾಸಗಿ ಒಡೆತನದಲ್ಲಿದ್ದ ಸಂಸ್ಥೆಗಳು ಇಂದು ಸಾರ್ವಜನಿಕ ವಲಯದಲ್ಲಿ ಬಂದಿರುವುದರಿಂದ ಮಾಲೀಕರು ಮತ್ತು ಕಾರ್ಮಿಕರು ಎಂಬ ವ್ಯತ್ಯಾಸ ಈಗ ಉಳಿದಿಲ್ಲ. ಅಧಿಕಾರಿಗಳು ಮತ್ತು ಕಾರ್ಮಿಕರು ಸೇರಿ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.ಈಶಾನ್ಯ ವಲಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಮಂಡಳದ ವತಿಯಿಂದ ವಿಭಾಗೀಯ ಕಾರ್ಯಾಗಾರದ ಆವರಣದಲ್ಲಿ ಶನಿವಾರ ಜರುಗಿದ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕಾರ್ಮಿಕರ ಕಲ್ಯಾಣಕ್ಕಾಗಿಯೇ ಪ್ರತ್ಯೇಕವಾಗಿ 44 ಕಾನೂನುಗಳಿವೆ. ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ಅಧಿಕಾರಿಗಳು ಮತ್ತು ಕಾರ್ಮಿಕರು ಸಹಕಾರ ನೀಡಬೇಕು. ತಮ್ಮ ಜವಾಬ್ದಾರಿ ಅರಿತು ನ್ಯಾಯಯುತವಾಗಿ ಮತ್ತು ಪ್ರಾಮಾಣಿಕವಾಗಿ ಕೆಲಸ ಮಾಡಿದಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದರು.ಗುಲ್ಬರ್ಗ ವಿಶ್ವವಿದ್ಯಾಲಯದಿಂದ ಈಚೆಗೆ ಗೌರವ ಡಾಕ್ಟರೇಟ್ ಪದವಿ ಪಡೆದ ಖರ್ಗೆ ಅವರನ್ನು, ದಕ್ಷ ಆಡಳಿತ ನಡೆಸಿದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಶಂಕರ ಪಾಟೀಲ ಅವರನ್ನು ಮಹಾ ಮಂಡಳದ ವತಿಯಿಂದ ಇದೇ ಸಂದರ್ಭದಲ್ಲಿ ವಿಶೇಷವಾಗಿ ಸನ್ಮಾನಿಸಲಾಯಿತು.ಮುಖ್ಯ ಅತಿಥಿಗಳಾಗಿ ಶಾಸಕರಾದ ಖಮರುಲ್ ಇಸ್ಲಾಂ, ಅರುಣಾ ಚಂದ್ರಶೇಖರ ಪಾಟೀಲ, ಶಶೀಲ ನಮೋಶಿ, ಅಲ್ಲಮಪ್ರಭು ಪಾಟೀಲ ಆಗಮಿಸಿದ್ದರು. ಚಂದ್ರಕಾಂತ ಗದ್ದಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಪ್ರೊ. ಶಿವರಾಜ ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ಇಸ್ಮಾಯಿಲ್ ಪಟೇಲ್ ಸ್ವಾಗತಿಸಿದರು. ರಶೀದ್ ಜಾವೇದ ವಿವಿಧ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.