ಸೋಮವಾರ, ಮೇ 23, 2022
29 °C

ಐಐಐಟಿ ಸ್ಥಳಾಂತರ ಬೇಡ: ಎಚ್‌ಕೆಸಿಸಿಐ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಗುಲ್ಬರ್ಗದಲ್ಲಿ ಸ್ಥಾಪಿಸಲು ಉದ್ದೇಶಿತ ಇಂಡಿಯನ್ ಇನ್ಸ್‌ಟಿಟ್ಯೂಟ್ ಆಫ್ ಇನ್ಫರ್ಮೇಶನ್ ಟೆಕ್ನಾಲಜೀಸ್ (ಐಐಐಟಿ) ಸಂಸ್ಥೆಯನ್ನು ಧಾರವಾಡಕ್ಕೆ ಸ್ಥಳಾಂತರಿಸಿರುವುದು  ಆಘಾತಕಾರಿ ಹಾಗೂ ಆತಂಕಕಾರಿ ಸುದ್ದಿ ಆಗಿದೆ ಎಂದು ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಪ್ರತಿಕ್ರಿಯಿಸಿದೆ.ಈ ಹಿಂದೆ ಗುಲ್ಬರ್ಗದಲ್ಲಿ ಮಾಹಿತಿ ತಂತ್ರಜ್ಞಾನ ಪಾರ್ಕ್ ಸ್ಥಾಪಿಸುವುದಾಗಿ ಭರವಸೆ ನೀಡಲಾಗಿತ್ತು. ಆ ಉದ್ದೇಶಕ್ಕಾಗಿಯೇ 100 ಎಕರೆ ಭೂಮಿಯನ್ನು ನಂದೂರು-ಕೆಸರಟಗಿ ರಸ್ತೆಯಲ್ಲಿ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಭೂಮಿಯ ಕೊರತೆಯ ವಾದವನ್ನು ಅಲ್ಲಗಳೆಯಬಹುದಾಗಿದೆ.ಐಟಿ ಪಾರ್ಕ್ ಸ್ಥಾಪನೆ ಮಾಡುತ್ತಿರುವಾಗ ಐಐಐಟಿಯನ್ನು ಧಾರವಾಡಕ್ಕೆ ಸ್ಥಳಾಂತರಿಸುತ್ತಿರುವ ಔಚಿತ್ಯವೇನು? ಗುಲ್ಬರ್ಗದಂಥ ಹಿಂದುಳಿದ, ಅಲ್ಪಸಂಖ್ಯಾತರೇ ಹೆಚ್ಚಾಗಿರುವ ಪ್ರದೇಶದಲ್ಲಿಯೇ ಐಐಐಟಿ ಸ್ಥಾಪನೆಯಾಗಬೇಕು. ಈ ಭಾಗದ ಸಚಿವರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಈ ಪ್ರದೇಶದ ಜನರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಐಐಐಟಿಯನ್ನು ಗುಲ್ಬರ್ಗಕ್ಕೆ ಉಳಿಸಿಕೊಳ್ಳುವಂತೆ ಶ್ರಮಿಸಬೇಕು ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎಚ್‌ಕೆಸಿಸಿಐ ಅಧ್ಯಕ್ಷ ಗೋಪಾಲಕೃಷ್ಣ ವಿ.ರಘೋಜಿ, ಸಂದೀಪ್ ಜವಳಕರ್, ಸೋಮಶೇಖರ್ ಜಿ.ಟೆಂಗಳಿ ಮುಂತಾದವರು ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.