ಪ್ರತ್ಯೇಕ ಅಪಘಾತ: ಇಬ್ಬರ ಸಾವು

ಬುಧವಾರ, ಏಪ್ರಿಲ್ 24, 2019
31 °C

ಪ್ರತ್ಯೇಕ ಅಪಘಾತ: ಇಬ್ಬರ ಸಾವು

Published:
Updated:

ಬೆಂಗಳೂರು: ನಗರದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ವೈದ್ಯಕೀಯ ವಿದ್ಯಾರ್ಥಿ ಸೇರಿ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ.

ಬನಶಂಕರಿ 3ನೇ ಹಂತದ ದತ್ತಾತ್ರೇಯ ನಗರದಲ್ಲಿ ಬೈಕ್‌ ಉರುಳಿಬಿದ್ದಿದ್ದರಿಂದ ಸವಾರ ಅಬ್ರಾಹಂ ಫಿಲಿಪ್ಸ್ ಸಜಿ (23) ಮೃತಪಟ್ಟಿದ್ದಾರೆ.

‘ಕೇರಳದ ಅಬ್ರಾಹಂ, ನಗರದ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ವಸತಿ ನಿಲಯದಲ್ಲಿ ಉಳಿದುಕೊಂಡಿದ್ದ ಅವರು ಅಂಗಡಿಗೆ ಹೋಗಿ ಗೃಹೋಪಯೋಗಿ ಸಾಮಗ್ರಿಗಳನ್ನು ತೆಗೆದುಕೊಂಡು ವಾಪಸು ಬರುವಾಗ ಈ ಅವಘಡ ಸಂಭವಿಸಿದೆ’ ಎಂದು ಬನಶಂಕರಿ ಸಂಚಾರ ಠಾಣೆ ಪೊಲೀಸರು ಹೇಳಿದರು.

‘ಅಬ್ರಾಹಂ ಚಲಾಯಿಸುತ್ತಿದ್ದ ಬೈಕ್, ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಉರುಳಿಬಿದ್ದಿತ್ತು. ಹಣೆ ಹಾಗೂ ಕಣ್ಣಿಗೆ ತೀವ್ರ ಗಾಯವಾಗಿ ನರಳಾಡುತ್ತಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದರು. ಮಾರ್ಗಮಧ್ಯೆಯೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಅಪಘಾತದ ಬಗ್ಗೆ ಸ್ಥಳೀಯರ ಹೇಳಿಕೆ ಪಡೆಯಲಾಗಿದೆ’ ಎಂದು ವಿವರಿಸಿದರು.

ಲಾರಿ ಹರಿದು ಟೆಕಿ ಸಾವು: ಹೊಸೂರು ಮುಖ್ಯರಸ್ತೆಯ ಎನ್‌ಟಿಟಿಎಫ್‌ ಕಾಲೇಜು ಬಳಿ ಸಂಭವಿಸಿದ ಅಪಘಾತದಲ್ಲಿ ಪ್ರಶಾಂತ್ ಮಜುಂದಾರ್ (43) ಎಂಬುವರು ಮೃತಪಟ್ಟಿದ್ದಾರೆ.

‘ಹುಬ್ಬಳ್ಳಿಯ ಪ್ರಶಾಂತ್, ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ಮನೆಗೆ ಹೊರಟಿದ್ದ ವೇಳೆ ಅವರ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿತ್ತು. ಕೆಳಗೆ ಬಿದ್ದ ಪ್ರಶಾಂತ್ ಅವರ ಮೇಲೆಯೇ ಲಾರಿಯ ಚಕ್ರ ಹರಿದುಹೋಗಿತ್ತು. ತೀವ್ರ ಗಾಯಗೊಂಡು ಅವರು ಮೃತಪಟ್ಟರು’ ಎಂದು ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸರು ಹೇಳಿದರು.

‘ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ. ಲಾರಿಯನ್ನು ಜಪ್ತಿ ಮಾಡಿ ಚಾಲಕ ರಾಜುನನ್ನು ಬಂಧಿಸಲಾಗಿದೆ’ ಎಂದು ಅವರು ತಿಳಿಸಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !