ಅಪಘಾತ: ಬಿ.ಎಸ್ಸಿ ವಿದ್ಯಾರ್ಥಿ ಸಾವು

7

ಅಪಘಾತ: ಬಿ.ಎಸ್ಸಿ ವಿದ್ಯಾರ್ಥಿ ಸಾವು

Published:
Updated:

ಬೆಂಗಳೂರು: ಆಡುಗೋಡಿ ಸಮೀಪದ ಐಶ್ವರ್ಯ ಜಂಕ್ಷನ್‌ನ ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಕಾರು ಗುದ್ದಿದ್ದರಿಂದ ಸವಾರ ಪ್ರವೀಣ್ ಕುಮಾರ್ (19) ಎಂಬುವರು ಮೃತಪಟ್ಟಿದ್ದಾರೆ.

ಜಯನಗರದ ಜೈನ್ ಕಾಲೇಜಿನಲ್ಲಿ ಬಿ.ಎಸ್ಸಿ ಎರಡನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರವೀಣ್‌, ಕೆಲಸ ನಿಮಿತ್ತ ಬೈಕ್‌ನಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ.

‘ಭಾನುವಾರ ರಾತ್ರಿ 9.30 ಗಂಟೆ ಸುಮಾರಿಗೆ ಬೆಳ್ಳಂದೂರು ಕಡೆಯಿಂದ ಐಶ್ವರ್ಯ ಜಂಕ್ಷನ್‌ಗೆ ಬಂದಿದ್ದ ಪ್ರವೀಣ್, ರೆಡ್‌ ಸಿಗ್ನಲ್‌ ಬಿದ್ದಿದ್ದನ್ನು ಗಮನಿಸಿ ಬೈಕ್‌ ನಿಲ್ಲಿಸಿದ್ದರು. ಹಿಂದಿನಿಂದ ವೇಗವಾಗಿ ಬಂದ ಕಾರು, ಬೈಕ್‌ಗೆ ಗುದ್ದಿತ್ತು. ಬೈಕ್‌ನಿಂದ ಬಿದ್ದು ತೀವ್ರ ಗಾಯಗೊಂಡಿದ್ದ ಪ್ರವೀಣ್‌ರನ್ನು ಸೇಂಟ್ ಜಾನ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ರಾತ್ರಿಯೇ ಅವರು ಮೃತಪಟ್ಟರು’ ಎಂದು ಆಡುಗೋಡಿ ಸಂಚಾರ ಪೊಲೀಸರು ತಿಳಿಸಿದರು.

‘ಘಟನೆ ಸಂಬಂಧ ಪ್ರತ್ಯಕ್ಷದರ್ಶಿಗಳ ಹೇಳಿಕೆ ಪಡೆಯಲಾಗಿದೆ. ಕಾರು ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ. ಚಾಲಕ ಭಾಸ್ಕರ್‌ನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ನೀಡಿದ್ದೇವೆ’ ಎಂದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !