ವಿಜಯಪುರ ಹೊರ ವಲಯದ ಬರಟಗಿ ತಾಂಡಾ ಬಳಿ ಭೀಕರ ಅಪಘಾತ: ಒಂದೇ ಕುಟುಂಬದ ಐವರ ಸಾವು

7

ವಿಜಯಪುರ ಹೊರ ವಲಯದ ಬರಟಗಿ ತಾಂಡಾ ಬಳಿ ಭೀಕರ ಅಪಘಾತ: ಒಂದೇ ಕುಟುಂಬದ ಐವರ ಸಾವು

Published:
Updated:
Prajavani

ವಿಜಯಪುರ: ವಿಜಯಪುರ ಹೊರ ವಲಯದ ಬರಟಗಿ ತಾಂಡಾ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಶುಕ್ರವಾರ ಸಂಜೆ, ಟಂಟಂ, ಲಾರಿ ನಡುವೆ ನಡೆದ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಸವನಬಾಗೇವಾಡಿ ತಾಲ್ಲೂಕು ಡೋಣೂರ ಗ್ರಾಮದ ಟಂಟಂ ಚಾಲಕ ಅರವಿಂದ ಅಗಸರ (35), ಈತನ ಪತ್ನಿ ಸುನೀತಾ ಅಗಸರ, ಎರಡು, ಮೂರು ವರ್ಷದ ಇಬ್ಬರು ಮಕ್ಕಳು ಹಾಗೂ ಅರವಿಂದ ಪತ್ನಿಯ ತಾಯಿ ಸ್ಥಳದಲ್ಲೇ ಮೃತಪಟ್ಟಿದ್ದು, ಮಗುವೊಂದು ಗಂಭೀರ ಗಾಯಗೊಂಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್‌ ಅಮೃತ್ ನಿಕ್ಕಂ ತಿಳಿಸಿದರು.

ಡೋಣೂರ ಗ್ರಾಮದಿಂದ ತಿಡಗುಂದಿಗೆ ಟಂಟಂನಲ್ಲಿ ಚಲಿಸುತ್ತಿದ್ದ ಸಂದರ್ಭ ಅಪಘಾತ ನಡೆದಿದೆ. ಡಿಕ್ಕಿಯ ರಭಸಕ್ಕೆ ಟಂಟಂ ಸಂಪೂರ್ಣ ಜಖಂಗೊಂಡಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಮಗುವನ್ನು ಚಿಕಿತ್ಸೆಗಾಗಿ ವಿಜಯಪುರದ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು ಆಸ್ಪತ್ರೆಗಾಗಿ ದಾಖಲಿಸಲಾಗಿದ್ದು, ಹೆಚ್ಚಿನ ವಿವರ ತಿಳಿದು ಬಂದಿಲ್ಲ ಎಂದು ಹೇಳಿದರು.

Tags: 

ಬರಹ ಇಷ್ಟವಾಯಿತೆ?

 • 3

  Happy
 • 1

  Amused
 • 4

  Sad
 • 1

  Frustrated
 • 4

  Angry

Comments:

0 comments

Write the first review for this !