ಅಪಘಾತ: ವ್ಯವಸ್ಥಾಪಕಿ, ಕ್ಯಾಷಿಯರ್ ಸಾವು

ಭಾನುವಾರ, ಮೇ 26, 2019
28 °C

ಅಪಘಾತ: ವ್ಯವಸ್ಥಾಪಕಿ, ಕ್ಯಾಷಿಯರ್ ಸಾವು

Published:
Updated:

ಬೆಂಗಳೂರು: ನಗರದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಖಾಸಗಿ ಕಂಪನಿಯ ವ್ಯವಸ್ಥಾಪಕಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ.

ಯಲಹಂಕದ ಎಂ.ಎಸ್.ಪಾಳ್ಯ ರಸ್ತೆಯಲ್ಲಿ ಸಿಮೆಂಟ್ ಮಿಕ್ಸರ್ ಟ್ರಕ್‌ನ ಚಕ್ರವು ಮೈ ಮೇಲೆ ಹರಿದಿದ್ದರಿಂದ ಕವಿತಾ (36) ಎಂಬುವರು ದುರ್ಮರಣಕ್ಕೀಡಾಗಿದ್ದಾರೆ.

‘ವಿದ್ಯಾರಣ್ಯಪುರದ ಕವಿತಾ, ಹೆಸರುಘಟ್ಟ ರಸ್ತೆಯಲ್ಲಿರುವ ಖಾಸಗಿ ಕಂಪನಿಯೊಂದರಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದರು. ಶನಿವಾರ ಸಂಜೆ ಕೆಲಸ ಮುಗಿಸಿ ಸ್ಕೂಟರ್‌ನಲ್ಲಿ ಮನೆಗೆ ಹೊರಟಿದ್ದ ವೇಳೆ ಈ ಅವಘಡ ಸಂಭವಿಸಿದೆ’ ಎಂದು ಯಲಹಂಕ ಸಂಚಾರ ಪೊಲೀಸರು ಹೇಳಿದರು.

‘ಸ್ಕೂಟರ್‌ಗೆ ಟ್ರಕ್‌ ಡಿಕ್ಕಿ ಹೊಡೆಯುತ್ತಿದ್ದಂತೆ ಕವಿತಾ ಕೆಳಗೆ ಬಿದ್ದಿದ್ದರು. ಅವರ ಮೇಲೆಯೇ ಟ್ರಕ್‌ನ ಚಕ್ರ ಹರಿದು ಹೋಗಿತ್ತು. ತೀವ್ರ ರಕ್ತಸ್ರಾವವಾಗಿ ಅವರು ಸ್ಥಳದಲ್ಲೇ ಮೃತಪಟ್ಟರು. ಈ ಬಗ್ಗೆ ಪ್ರತ್ಯಕ್ಷದರ್ಶಿಯೊಬ್ಬರ ಹೇಳಿಕೆ ಪಡೆಯಲಾಗಿದೆ’ ಎಂದರು.

‘ಟ್ರಕ್ ಚಾಲಕ ರಾಜಮೋಹನ್ ಎಂಬಾತನನ್ನು ಬಂಧಿಸಲಾಗಿದೆ’ ಎಂದರು.

ಕ್ಯಾಷಿಯರ್ ಸಾವು: ತ್ಯಾಗರಾಜನಗರದ 9ನೇ ಮುಖ್ಯರಸ್ತೆ ಬದಿಯ ಅಂಗಡಿಯೊಂದಕ್ಕೆ ಸ್ಕೂಟರ್ ಡಿಕ್ಕಿ ಹೊಡೆದಿದ್ದರಿಂದ ಸವಾರ ರಾಮಕೃಷ್ಣ (56) ಎಂಬುವರು ಮೃತಪಟ್ಟಿದ್ದಾರೆ.

‘ಶ್ರೀನಗರ ನಿವಾಸಿ ಆಗಿದ್ದ ರಾಮಕೃಷ್ಣ, ಕ್ಲಬ್‌ವೊಂದರಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ರಾತ್ರಿ 11ರ ಸುಮಾರಿಗೆ ಮನೆಗೆ ಹೊರಟಿದ್ದಾಗ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಂಗಡಿಗೆ ಡಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡು ಅವರು ಮೃತಪಟ್ಟಿದ್ದಾರೆ’ ಎಂದು ಬನಶಂಕರಿ ಸಂಚಾರ ಪೊಲೀಸರು ಹೇಳಿದರು. 

Tags: 

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !