‘ವೈಮಾನಿಕ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶ’

7

‘ವೈಮಾನಿಕ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶ’

Published:
Updated:
Deccan Herald

ಬೆಂಗಳೂರು: ‘ವೈಮಾನಿಕ ತಂತ್ರಜ್ಞಾನ ಕ್ಷೇತ್ರದ ನವೀನ ಅನ್ವೇಷಣೆಗಳಿಗೆ ವೇದಿಕೆ ಕಲ್ಪಿಸುವ ಮೂಲಕ ಬೆಂಗಳೂರು ಅಂತರರಾಷ್ಟ್ರೀಯ ಮಟ್ಟದಲ್ಲಿ ವೈಮಾನಿಕ ತಂತ್ರಜ್ಞಾನದ ನಗರವಾಗಿ ನಿರ್ಮಾಣವಾಗಲಿದೆ’ ಎಂದು ಕೇಂದ್ರ ವಿಜ್ಞಾನ-ತಂತ್ರಜ್ಞಾನ ಸಚಿವ ಡಾ.ಹರ್ಷವರ್ಧನ್ ಹೇಳಿದರು.

ಯಲಹಂಕದ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವೈಮಾನಿಕ ತಂತ್ರಜ್ಞಾನ ಹಾಗೂ ಇಂಟರ್‌ನೆಟ್‌ ಆಫ್ ಥಿಂಗ್ಸ್‌ನ ನೂತನ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

‘ವೈಮಾನಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಎಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗಗಳು ಸಿಗಬೇಕಾದರೆ ಅಗತ್ಯ ಕೌಶಲಯುಕ್ತ ಶಿಕ್ಷಣ ಹಾಗೂ ಕೈಗಾರಿಕೆಗಳ ನಿರೀಕ್ಷೆಗಳ ಬಗೆಗಿನ ಅರಿವು ಅಗತ್ಯ’ ಎಂದರು.

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ‘ಕೇಂದ್ರ ಸರ್ಕಾರ ವಿದೇಶಿ ಬಂಡವಾಳ ಹೂಡಿಕೆಯಲ್ಲಿದ್ದ ಅಡ್ಡಿ-ಆತಂಕಗಳನ್ನು ಸಡಿಲಗೊಳಿಸಿದ ಮೇಲೆ, ರಾಜ್ಯದ ವಿವಿಧೆಡೆ‌ ವೈಮಾನಿಕ ತಂತ್ರಜ್ಞಾನದ ಅನೇಕ ಕೈಗಾರಿಕೆಗಳು, ಸಂಶೋಧನಾ ಕೇಂದ್ರಗಳು ಅಧಿಕ ಪ್ರಮಾಣದಲ್ಲಿ ಸ್ಥಾಪನೆಗೊಂಡವು’ ಎಂದು ಹೇಳಿದರು.

 

ಬರಹ ಇಷ್ಟವಾಯಿತೆ?

 • 7

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !