ಸಮಗ್ರ ಕೃಷಿ ಅಭಿಯಾನಕ್ಕೆ ಚಾಲನೆ

7

ಸಮಗ್ರ ಕೃಷಿ ಅಭಿಯಾನಕ್ಕೆ ಚಾಲನೆ

Published:
Updated:

ಹೊಸಕೋಟೆ: ತಾಲ್ಲೂಕಿನ ಸಮಗ್ರ ಕೃಷಿ ಅಭಿಯಾನಕ್ಕೆ ಸೋಮವಾರ ಜಿಲ್ಲಾ ಪಂಚಾಯಿತಿ ಸದಸ್ಯೆ ರೂಪಾ ಮರಿಯಪ್ಪ ಚಾಲನೆ ನೀಡಿದರು. 

ಅಭಿಯಾನ ಜುಲೈ 9ರಿಂದ 26 ರವರೆಗೆ ನಡೆಯಲಿದೆ. ಎಲ್ಲ ಹೋಬಳಿಗಳಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮೊದಲೆರೆಡು ದಿನ ಕೃಷಿ ಅಧಿಕಾರಿಗಳು ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಇಲಾಖಾ ಕಾರ್ಯಕ್ರಮಗಳ ಬಗ್ಗೆ ಪ್ರಚಾರ ಮತ್ತು ರೈತರ ಸಮಸ್ಯೆಗಳಿಗೆ ಪರಿಹಾರ ಸೂಚಿಸಲಿದ್ದಾರೆ. ಮೂರನೆ ದಿನ ರೈತರು, ಇಲಾಖಾ ಅಧಿಕಾರಿಗಳು, ವಿಜ್ಞಾನಿಗಳೊಂದಿಗೆ ಸಂವಾದ ಮತ್ತು ಕೃಷಿ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕ ಶಂಕರಮೂರ್ತಿ ತಿಳಿಸಿದರು.
ಅಭಿಯಾನದ ಅಂಗವಾಗಿ ಕಲ್ಕುಂಟೆ ಗ್ರಾಮದಲ್ಲಿ ಪಶು ಇಲಾಖೆ ನೆರವಿನೊಡನೆ ಕುರಿಗಳಿಗೆ ಸಾಮೂಹಿಕ ಲಸಿಕೆ ಕಾರ್ಯಕ್ರಮ ಮತ್ತು ಬೀದಿ ನಾಟಕ ಪ್ರದರ್ಶಿಸಲಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !