ಸಂತೇಮರಹಳ್ಳಿ: ಗ್ರಾಮೀಣ ಭಾಗದ ರೈತರಿಗೆ ಉತ್ತಮ ಆದಾಯದ ಮೂಲವಾಗಿರುವ ಹೈನುಗಾರಿಕೆಯನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ ತಿಳಿಸಿದರು.

ಸಮೀಪದ ಬಾಗಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ₹2 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಉಗ್ರಾಣ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ರೈತರು ಉತ್ತಮ ಗುಣಮಟ್ಟದ ಹಾಲನ್ನು ನೀಡಬೇಕು. ಚಾಮುಲ್ ವತಿಯಿಂದ ರೈತರಿಗೆ ₹2 ಸಹಾಯ ಧನ ನೀಡಲಾಗಿದೆ. ಮ್ಯಾಟ್ ಹಾಗೂ ಸ್ಟಾಪ್ ಕಟರ್ ನೀಡಲಾಗುವುದು. ರೈತರಿಗೆ ಉತ್ತಮವಾದ ಆದಾಯದ ಮೂಲವಾಗಿದೆ’ ಎಂದು ಹೇಳಿದರು.

ಚಾಮುಲ್ ವ್ಯವಸ್ಥಾಪಕ ನಿರ್ದೇಶಕ ರಾಜಕುಮಾರ್, ನಿರ್ದೇಶಕರಾದ ಬಸವರಾಜು, ಸದಾಶಿವಮೂರ್ತಿ, ನಾಮನಿರ್ದೇಶಕ ಕಮರವಾಡಿ ರೇವಣ್ಣ, ಡೇರಿ ಅಧ್ಯಕ್ಷ ಕರಗಶೆಟ್ಟಿ, ಡಾ.ಅಮರ್, ಇಒ ರಾಜು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲೋಕೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-37-1819389

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.