ಸಂತೇಮರಹಳ್ಳಿ: ಸಮೀಪದ ದೇಶವಳ್ಳಿಯಲ್ಲಿ ಜಿಲ್ಲಾ ಪಂಚಾಯಿತಿ, ಪಶುಪಾಲನಾ ಇಲಾಖೆ, ಪಶು ವೈದ್ಯಕೀಯ ಸೇವೆ ಹಾಗೂ ಸಂತೇಮರಹಳ್ಳಿ ಪಶು ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣದ ಕಾರ್ಯಕ್ರಮದಡಿ ಜಾನುವಾರುಗಳಿಗೆ ಸೋಮವಾರ ಕಾಲುಬಾಯಿ ಜ್ವರ ನಿಯಂತ್ರಣ ಲಸಿಕೆ ನೀಡಲಾಯಿತು.

ಪಶು ವೈದ್ಯಾಧಿಕಾರಿ ಡಾ.ರಾಘವೇಂದ್ರ ಮಾತನಾಡಿ, ‘ಕಾಲುಬಾಯಿ ಜ್ವರವನ್ನು ತಡೆಗಟ್ಟಲು ರೈತರು ಕಡ್ಡಾಯವಾಗಿ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು. ರಾಜ್ಯ ಸರ್ಕಾರ ಮೇ 23ರವರೆಗೆ ಲಸಿಕೆ ಅಭಿಯಾನವನ್ನು ಹಮ್ಮಿಕೊಂಡಿದ್ದು, ಆಸ್ಪತ್ರೆ ವ್ಯಾಪ್ತಿಗೆ ಒಳಪಟ್ಟಿರುವ ಎಲ್ಲ ಗ್ರಾಮಗಳಿಗೆ ಆಸ್ಪತ್ರೆ ಸಿಬ್ಬಂದಿ ಜೊತೆ ತೆರಳಿ ಲಸಿಕೆ ನೀಡುವುದರ ಜತೆಗೆ ಅರಿವು ಮೂಡಿಸಲಾಗುತ್ತಿದೆ. ಈ ಅವಕಾಶವನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.

‘ಬೇಸಿಗೆ ಕಾಲವಾಗಿರುವುದರಿಂದ ಜಾನುವಾರುಗಳನ್ನು ನೆರಳಿನಲ್ಲಿ ಇರಿಸಬೇಕು. ಹೆಚ್ಚಿನ ಪ್ರಮಾಣದಲ್ಲಿ ನೀರು ಕುಡಿಸುವ ಮೂಲಕ ಅವುಗಳ ಆರೋಗ್ಯದ ಕಡೆಗೆ ರೈತರು ಹೆಚ್ಚು ಗಮನ ಹರಿಸಬೇಕು’ ಎಂದು ತಿಳಿಸಿದರು.

ಪಶು ಇಲಾಖೆಯ ಮಹದೇವಸ್ವಾಮಿ, ಕಿರಣ್, ಪಶುಸಖಿ ಮಂಜುಳಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-37-179623089

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.