ಹನೂರು: ತಾಲ್ಲೂಕಿನ ಕುರಟ್ಟಿ ಹೊಸೂರು ಸಮೀಪದ ಸೀ ವಿಲೇಜ್ನಲ್ಲಿ ಏಳು ಕುರಿಗಳು ಅನುಮಾನಾಸ್ಪದವಾಗಿ ಸೋಮವಾರ ಮೃತಪಟ್ಟಿವೆ.

ಅರಬಗೆರೆ ಸಿ ವಿಲೇಜ್ನ ಮುತ್ತರಾಜು ಅವರಿಗೆ ಸೇರಿದ್ದ ಕುರಿಗಳು ಮೇವು ತಿಂದ ಬಳಿಕ ಕೆರೆಯ ನೀರು ಕುಡಿದಿವೆ. ಬಳಿಕ ಕುರಿಗಳು ಏಕಾಏಕಿ ಬಿದ್ದು ಮೃತಪಟ್ಟಿವೆ. ಸ್ಥಳಕ್ಕೆ ಪಶುವೈದ್ಯರು ಭೇಟಿ ನೀಡಿ ಪರಿಶೀಲಿಸಿ ಮರಣೋತ್ತರ ಪರೀಕ್ಷೆ ನಡೆಸಿ ನೀರಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದಾರೆ. ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.

ಈ ಹಿಂದೆ ಈ ಭಾಗದಲ್ಲಿ ಹಸುಗಳು ಅನುಮಾನಸ್ಪದವಾಗಿ ಮೃತಪಟ್ಟಿದ್ದವು. ಬಳಿಕ ಯೂರಿಯಾ ಮಿಶ್ರಿತ ನೀರು ಕುಡಿದು ಮೃತಪಟ್ಟಿರುವುದು ಮರಣೋತ್ತರ ಪರೀಕ್ಷೆ ವರದಿಯಿಂದ ತಿಳಿದು ಬಂದಿತ್ತು. ಇದೀಗ ಕುರಿಗಳು ಸಾಮೂಹಿಕವಾಗಿ ಮೃತಪಟ್ಟಿರುವುದು ಕುರಿಗಾಯಿಗಳಲ್ಲಿ ಆತಂಕ ಮೂಡಿಸಿದ್ದು, ಶೀಘ್ರ ತನಿಖೆಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-37-408660822

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.