ಚನ್ನಪಟ್ಟಣ: ತಾಲ್ಲೂಕಿನ ಅಣಿಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಸೋಮವಾರ ಬಮೂಲ್ ಒಕ್ಕೂಟದಿಂದ ಆಯೋಜಿಸಲಾಗಿದ್ದ ರಾಸುಗಳಿಗೆ ವಾರ್ಷಿಕ ವಿಮೆ ಮಾಡಿಸುವ ಯೋಜನೆಗೆ ಶಾಸಕ ಸಿ.ಪಿ.ಯೋಗೇಶ್ವರ್ ಚಾಲನೆ ನೀಡಿದರು.

ತಾಲ್ಲೂಕಿನಲ್ಲಿ ಸುಮಾರು 44 ಸಾವಿರಕ್ಕೂ ಹೆಚ್ಚು ರಾಸುಗಳಿಗೆ ಬಮೂಲ್ ಒಕ್ಕೂಟದಿಂದ ವಿಮೆ ಮಾಡಿಸುವ ಯೋಜನೆಗೆ ಚಾಲನೆ ನೀಡಲಾಗಿದೆ. ತಾಲ್ಲೂಕಿನ ಹಾಲು ಉತ್ಪಾದಕ ರೈತರು ತಮ್ಮ ರಾಸುಗಳಿಗೆ ವಿಮೆ ಮಾಡಿಸುವ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ತಾಲ್ಲೂಕಿನಲ್ಲಿ ಪ್ರತಿದಿನ 3.5 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಹಾಲು ಉತ್ಪಾದನೆಯಲ್ಲಿ ತಾಲ್ಲೂಕು ರಾಜ್ಯದಲ್ಲಿಯೇ ಮೊದಲನೇ ಸ್ಥಾನದಲ್ಲಿದೆ. ಈ ಸಾಧನೆಗೆ ತಾಲ್ಲೂಕಿನ ಹಾಲು ಉತ್ಪಾದಕ ರೈತರು, ಆಡಳಿತ ವರ್ಗದವರು ಕಾರಣವಾಗಿದ್ದಾರೆ ಎಂದು ಪ್ರಶಂಸಿಸಿದರು.

ಆಕಸ್ಮಿಕವಾಗಿ ರಾಸುಗಳು ಸಾವನ್ನಪ್ಪಿದರೆ ವಿಮಾ ಹಣ ₹1 ಲಕ್ಷದಿಂದ ₹1.5 ಲಕ್ಷದವರೆಗೂ ದೊರೆಯಲಿದೆ ಎಂದರು.

ಬಮೂಲ್ ನಿರ್ದೇಶಕ ಎಸ್.ಲಿಂಗೇಶ್ ಕುಮಾರ್ ಮಾತನಾಡಿ, ಈ ಹಿಂದೆ ಖಾಸಗಿ ಕಂಪನಿಗಳಿಂದ ವಿಮಾ ಯೋಜನೆ ಜಾರಿಯಾಗುತ್ತಿತ್ತು. ಈಗ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ಇದೇ ಮೊದಲ ಬಾರಿಗೆ ಬಮೂಲ್ ಒಕ್ಕೂಟದಿಂದಲೇ ವಿಮಾ ಯೋಜನೆ ಜಾರಿಗೆ ತಂದಿದ್ದಾರೆ. ರೈತರು ಶೇ 50ರಷ್ಟು ಹಣ ಕಟ್ಟಿದರೆ, ಬೆಂಗಳೂರು ಹಾಲು ಒಕ್ಕೂಟವು ಶೇ 50ರಷ್ಟು ಹಣ ಭರಿಸಲಿದೆ ಎಂದರು.

ಬಮೂಲ್ ಶಿಬಿರದ ಉಪವ್ಯವಸ್ಥಾಪಕ ಸಿ.ಆರ್.ಕಿರಣ್, ಕೃಷಿ ಅಧಿಕಾರಿ ಜಿತೇಂದ್ರಕುಮಾರ್, ವಿಸ್ತರಣಾಧಿಕಾರಿ ರಾಜ, ಆನಂದ್, ಶ್ಯಾನುಭೋಗನಹಳ್ಳಿ ಪ್ರದೀಪ್, ಬಸವರಾಜು, ರಾಮಕೃಷ್ಣಮೂರ್ತಿ, ಕೆ.ಟಿ.ಲಕ್ಷ್ಮಮ್ಮ, ಕೃಷ್ಣ, ಗರಕಹಳ್ಳಿ ಶಿವಕುಮಾರ್, ಅನಂತಮೂರ್ತಿ, ಶಂಕರೇಗೌಡ, ಶಿವಲಿಂಗೇಗೌಡ, ರಮೇಶ್, ಶಿವಣ್ಣ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-14-618191975

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.