ವಾಡಿ: ಚಿತ್ತಾಪುರ ತಾಲ್ಲೂಕಿಗೆ ಉಸ್ಮಾನಾಬಾದಿ ಮೇಕೆ ತಳಿ ಅಭಿವೃದ್ಧಿ ಕೇಂದ್ರ ಮಂಜೂರಾಗಿದ್ದು ಅಧಿಕಾರಿಗಳು ಮಂಗಳವಾರ ಲಾಡ್ಲಾಪುರ ಗ್ರಾಮದ ಸ್ಥಳ ಪರಿಶೀಲನೆ ನಡೆಸಿದರು.

ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಚಿತ್ತಾಪುರ ತಾಲ್ಲೂಕಿಗೆ ಮಂಜೂರಾಗಿರುವ ಕೇಂದ್ರವನ್ನು ಕಲಬುರಗಿ ಯಾದಗಿರಿ ಜಿಲ್ಲೆಗಳ ನಡುವಣ ಹೆದ್ದಾರಿ ಪಕ್ಕದ ಲಾಡ್ಲಾಪುರದಲ್ಲಿ ಸ್ಥಾಪಿಸಲು ಸ್ಥಳೀಯ ನಿವಾಸಿ ಸಿದ್ದರಾಜ ಮಲ್ಕಂಡಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಪಶುಪಾಲನಾ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದರು.

ರಾಷ್ಟ್ರೀಯ ಹೆದ್ದಾರಿ 150ರ ಪಕ್ಕದಲ್ಲಿ ಜಾಗ ಗುರುತಿಸಿದ್ದು ಮಂಗಳವಾರ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವೀಂದ್ರಪ್ಪ ಮರತೂರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿ ಸಮ್ಮತಿ ಸೂಚಿಸಿದರು.

‘ಹೆದ್ದಾರಿ ಪಕ್ಕದಲ್ಲಿರುವುದರಿಂದ ಕೇಂದ್ರಕ್ಕೆ ಸ್ಥಳ ಸೂಕ್ತವಾಗಿದೆ. ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮಕ್ಕೆ ಜಮೀನು ಹಸ್ತಾಂತರಗೊಂಡ ಬಳಿಕ ಬಜೆಟ್ ಅನುಮೋದನೆ ಪಡೆದು ಕಟ್ಟಡ ನಿರ್ಮಾಣ ಕಾರ್ಯ ಆರಂಭಿಸಲಾಗುವುದು’ ಎಂದು ಅವರು ತಿಳಿಸಿದರು. ಕೂಡಲೇ ಸರ್ವೆ ಮಾಡಿಸಿ ವರದಿ ಸಲ್ಲಿಸುವಂತೆ ಸ್ಥಳದಲ್ಲಿದ್ದ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಉಪ ನಿರ್ದೇಶಕ ರವೀಂದ್ರನಾಥ, ತಹಶೀಲ್ದಾರ್ ನಾಗಯ್ಯ ಹಿರೇಮಠ, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಸಹಾಯಕ ನಿರ್ದೇಶಕ ಡಾ.ಶಂಕರ ಕಣ್ಣಿ, ಕಂದಾಯ ನೀರಿಕ್ಷಕ ಪ್ರಶಾಂತ ರಾಠೋಡ, ಗ್ರಾ.ಪಂ. ಮಾಜಿ ಅಧ್ಯಕ್ಷ ಈರಣ್ಣ ಮಲ್ಕಂಡಿ, ಗ್ರಾಮಲೆಕ್ಕಿಗ ಸಂಗಮೇಶ, ಶಿವಕುಮಾರ ದಂಡಬಾ ಹಾಗೂ ಇನ್ನಿತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-31-1699798296

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.