ಶಿರಸಿ: ‘ಹಾಲಿನ ಡೇರಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಹಳ್ಳಿಗಳ ಕೃಷಿ ಮತ್ತು ಆರ್ಥಿಕ ವ್ಯವಸ್ಥೆ ಸುಧಾರಿಸಲು ಸಾಧ್ಯ’ ಎಂದು ಧಾರವಾಡ ಹಾಲು ಒಕ್ಕೂಟದ ಉಪಾಧ್ಯಕ್ಷ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ಅಭಿಪ್ರಾಯಪಟ್ಟರು.

ನಗರದ ಶಿರಸಿ ಉಪವಿಭಾಗದಲ್ಲಿ ಮಂಗಳವಾರ ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಹಾಗೂ ಕಲ್ಯಾಣ ಸಂಘದ ವತಿಯಿಂದ ವಿವಿಧ ಹಾಲು ಉತ್ಪಾದಕರ ಸಂಘಗಳ ಫಲಾನುಭವಿಗಳಿಗೆ ಚೆಕ್ ವಿತರಿಸಿ ಅವರು ಮಾತನಾಡಿದರು.

‘ಯುವಜನತೆಗೆ ಹಾಲು ಸೊಸೈಟಿಗಳ ಮಹತ್ವವನ್ನು ಮನವರಿಕೆ ಮಾಡಿಕೊಡುವ ಮೂಲಕ ಅವರನ್ನು ಗ್ರಾಮದ ಅಭಿವೃದ್ಧಿಯಲ್ಲಿ ತೊಡಗಿಸಬೇಕು’ ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಮಂಜುಗುಣಿ ಹಾಲು ಉತ್ಪಾದಕರ ಸಹಕಾರ ಸಂಘದ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ₹1.8 ಲಕ್ಷದ ಚೆಕ್ ಅನ್ನು ಸಂಘದ ಅಧ್ಯಕ್ಷ ಪ್ರವೀಣ ಗೌಡ ತೆಪ್ಪಾರ ಅವರಿಗೆ ಹಸ್ತಾಂತರಿಸಲಾಯಿತು. ಅಲ್ಲದೆ, ಮೃತ ಸದಸ್ಯರ ವಾರಸುದಾರರಿಗೆ, ಶಸ್ತ್ರಚಿಕಿತ್ಸೆಗೆ ಒಳಗಾದ ಸಿಬ್ಬಂದಿ ಹಾಗೂ ಸದಸ್ಯರಿಗೆ ತಲಾ ₹10,000 ಮತ್ತು ₹5,000 ಮೊತ್ತದ ಸಹಾಯಧನ ವಿತರಿಸಲಾಯಿತು. ಜಾನುವಾರು ವಿಮಾ ಯೋಜನೆಯಡಿ ಮರಣ ಹೊಂದಿದ ಜಾನುವಾರುಗಳ ಮಾಲೀಕರಿಗೆ ₹32,000 ದಿಂದ ₹57,000 ವರೆಗಿನ ವಿಮಾ ಮೊತ್ತದ ಚೆಕ್ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಒಕ್ಕೂಟದ ಜಿಲ್ಲಾ ಮುಖ್ಯಸ್ಥ ಪ್ರಸಾದ ಬಿಜೂರ್, ಸಹಾಯಕ ವ್ಯವಸ್ಥಾಪಕ ವಿವೇಕ ಎಸ್.ಆರ್., ಗುರುದರ್ಶನ ಭಟ್, ವಿಸ್ತರಣಾಧಿಕಾರಿ ಮೌನೇಶ ಸೋನಾರ ಸೇರಿದಂತೆ ವಿವಿಧ ಸಂಘಗಳ ಪದಾಧಿಕಾರಿಗಳು ಹಾಗೂ ಫಲಾನುಭವಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-20-29155729

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.