ಶಿರ್ವ: ‘ಗ್ರಾಮೀಣ ಭಾಗದ ಹಾಲು ಸಂಘಗಳು ಬಲಗೊಳ್ಳುತ್ತಿವೆ. ಪಂಜಿಮಾರು ಸಂಘದ ಸ್ವಂತ ಕಟ್ಟಡದ ಕನಸು ನನಸಾಗಿದೆ. ಹಾಲಿನ ಸಂಗ್ರಹಣೆ 500ರಿಂದ 600 ಲೀಟರ್ಗೆ ಏರಿಸಬೇಕು. ರಾಜ್ಯದ 15 ಒಕ್ಕೂಟಗಳಲ್ಲಿ ಗರಿಷ್ಠ ದರ ನೀಡುವ ಒಕ್ಕೂಟ ನಮ್ಮದಾಗಿದೆ. ಲಾಭಾಂಶ ಕಡಿಮೆ ಮಾಡಿ ರೈತರಿಗೆ ನೀಡಲಾಗುತ್ತಿದ್ದು, ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದ್ದೇವೆ. ರೈತರು ಗುಣಮಟ್ಟದ ಕಲಬೆರಕೆ ರಹಿತ ಹಾಲು ನೀಡಿದರೆ ಉತ್ತಮ ಮಾರುಕಟ್ಟೆ ಒದಗಿಸುತ್ತೇವೆ’ ಎಂದು ದ.ಕ.ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಕೊಡವೂರು ಹೇಳಿದರು.

ಶಿರ್ವ ಸಮೀಪದ ಪಂಜಿಮಾರು ಹಾಲು ಉತ್ಪಾದಕರ ಸಹಕಾರ ಸಂಘ ನಿರ್ಮಿಸಿದ ನೂತನ ಕಟ್ಟಡ ‘ಉದ್ಭವ’ವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಹಾಲಿನ ಬೇರೆ ಬೇರೆ ಉತ್ಪನ್ನಗಳನ್ನು ತಯಾರಿಸಿ ಜನರಿಗೆ ತಲುಪಿಸುತ್ತಿದ್ದೇವೆ. ತಿರುಪತಿ ಪ್ರಸಾದಕ್ಕೆ ನಂದಿನಿ ತುಪ್ಪ ಬಳಕೆಯಾಗುತ್ತದೆ. ಒಕ್ಕೂಟವು ಹೈನುಗಾರರಿಗೆ ವಿವಿಧ ಯೋಜನೆಗಳ ಮೂಲಕ ಪಶು ಆಹಾರ, ಪರಿಕರಗಳಿಗೆ ಅನುದಾನ ನೀಡುತ್ತಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಪಂಜಿಮಾರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಕೋಡು ವಹಿಸಿದ್ದರು. ಪಂಜಿಮಾರು ಘಟಕದ ವತಿಯಿಂದ ಮಂಗಳೂರು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಕೊಡವೂರು ಮತ್ತು ಉಪಾಧ್ಯಕ್ಷ ಉದಯ ಎಸ್ ಕೋಟ್ಯಾನ್ ಅವರನ್ನು ಸನ್ಮಾನಿಸಲಾಯಿತು.

ಕರ್ನಾಟಕ ಹಾಲು ಮಹಾ ಮಂಡಲದ ನಿರ್ದೇಶಕ ಐಕಳಬಾವ ದೇವಿ ಪ್ರಸಾದ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ನಿರ್ದೇಶಕರಾದ ಸುಧಾಕರ ಶೆಟ್ಟಿ ಮೂಡಾರು, ಕೆ.ಶಿವಮೂರ್ತಿ, ಮಮತಾ ಆರ್. ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ, ಶೇಖರಣೆ ಮತ್ತು ತಾಂತ್ರಿಕ ವಿಭಾಗದ ವ್ಯವಸ್ಥಾಪಕ ರವಿರಾಜ್ ಉಡುಪ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಪು ಘಟಕದ ಯೋಜನಾಧಿಕಾರಿ ಮಮತಾ ಶೆಟ್ಟಿ, ಮುಲ್ಕಾಡಿ ದುರ್ಗಾಪರಮೇಶ್ವರಿ ದೇವಳದ ಆಡಳಿತ ಮೊಕ್ತೇಸರ ಸುಧೀರ್ ಹೆಗ್ಡೆ, ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ, ವಲದೂರು ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಅಶೋಕ್ ಕುಮಾರ್ ವಲದೂರು, ಬಂಟಕಲ್ಲು ಗಣೇಶೋತ್ಸವ ಸಮಿತಿ ಅಧ್ಯಕ್ಷ ಬಂಟಕಲ್ಲು ಮಾಧವ ಕಾಮತ್, ಕೋಡು ಶಾಲಾ ಹಳೆವಿದ್ಯಾರ್ಥಿ ಸಂಘದ ಕೋಶಾಧಿಕಾರಿ ರಾಜೇಶ್ ಶೆಟ್ಟಿ, ದ.ಕ ಹಾಲು ಒಕ್ಕೂಟದ ಉಪವ್ಯವಸ್ಥಾಪಕ ಮಾಧವ ಐತಾಳ್, ಸಹಾಯಕ ವ್ಯವಸ್ಥಾಪಕ ಪ್ರಶಾಂತ್ ಆರ್.ಜಿ, ವಿಸ್ತರಣಾಧಿಕಾರಿ ಅಬ್ದುಲ್ ಶಮೀರ್, ಪಂಜಿಮಾರು ಸಂಘದ ಉಪಾಧ್ಯಕ್ಷ ನಿತ್ಯಾನಂದ ನಾಯಕ್ ಪಾಲಮೆ ಉಪಸ್ಥಿತರಿದ್ದರು.

ಪ್ರಸಾದ್ ಶೆಟ್ಟಿ ವಲದೂರು ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಕೇಶ್ ಪೂಜಾರಿ ವಲದೂರು ವಂದಿಸಿದರು. ಒಕ್ಕೂಟದ ಸಹಾಯಕ ವ್ಯವಸ್ಥಾಪಕ ಯಶವಂತ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-28-2087813953

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.