ದೇವನಹಳ್ಳಿ: ರಾಸುಗಳ ಆರೋಗ್ಯ ರಕ್ಷಣೆಗೆ ಕಾಲುಬಾಯಿ ಜ್ವರದ ಲಸಿಕೆಯನ್ನು ಪ್ರತಿಯೊಬ್ಬ ರೈತರು ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಹಾಕಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.

ತಾಲೂಕಿನ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯಿಂದ ಈಚೆಗೆ ನಡೆದ ಲಸಿಕಾ ಅಭಿಯಾನದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕಾಲುಬಾಯಿ ಲಸಿಕಾ ಅಭಿಯಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಕಳೆದ ಎರಡು–ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಕಾಲುಬಾಯಿ ರೋಗದ ಪ್ರಕರಣಗಳು ಕಂಡುಬಂದಿಲ್ಲ. ಈ ಸಾಧನೆಯನ್ನು ಮುಂದುವರಿಸಲು ರೈತರು ಜಾನುವಾರುಗಳಿಗೆ ತಪ್ಪದೆ ಲಸಿಕೆ ಹಾಕಿಸಬೇಕು ಎಂದು ಹೇಳಿದರು.

ಬೇಸಿಗೆ ಹಿನ್ನೆಲೆ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ 35 ವಾರಗಳಿಗೆ ಸಾಕಾಗುವಷ್ಟು ಮೇವು ಸಂಗ್ರಹವಿದೆ. ಮಳೆಯಾಗಿರುವುದರಿಂದ ಹಸಿಮೆವು ಕೂಡ ಲಭ್ಯವಾಗುತ್ತಿದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-15-460566404

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.