ಶಿರಸಿ: ‘ಕೃಷಿ ಭೂಮಿಯ ಫಲವತ್ತತೆ ಹೆಚ್ಚಿಸಲು ಮತ್ತು ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುವ ಎಲೆಚುಕ್ಕಿ ರೋಗದಂತಹ ಸಮಸ್ಯೆಗಳನ್ನು ತಡೆಗಟ್ಟಲು ಆಕಳು ಮತ್ತು ಎಮ್ಮೆಯ ಸಗಣಿಯಿಂದ ತಯಾರಿಸಿದ ಸ್ಥಳೀಯ ಕೊಟ್ಟಿಗೆ ಗೊಬ್ಬರವೇ ಅತ್ಯಂತ ಪರಿಣಾಮಕಾರಿ’ ಎಂದು ಧಾರವಾಡ ಹಾಲು ಒಕ್ಕೂಟದ ಉಪಾಧ್ಯಕ್ಷ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಕನಕಾಪುರದಲ್ಲಿ ಕರ್ನಾಟಕ ಸಹಕಾರ ಹಾಲು ಮಹಾಮಂಡಳ ಹಾಗೂ ಧಾರವಾಡ, ಗದಗ ಮತ್ತು ಉತ್ತರ ಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಸ್ವಂತ ಕಟ್ಟಡ ಯೋಜನೆಯಡಿ ನಿರ್ಮಾಣವಾಗಲಿರುವ ನೂತನ ಕಟ್ಟಡಕ್ಕೆ ಬುಧವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

‘ಬಯಲುಸೀಮೆ ಪ್ರದೇಶಗಳಿಂದ ಬರುವ ಗೊಬ್ಬರದಲ್ಲಿ ಮಣ್ಣಿನ ಮಿಶ್ರಣ ಮತ್ತು ಜಂತುಹುಳುಗಳ ಕಾಟ ಹೆಚ್ಚಿರುವ ಸಾಧ್ಯತೆಯಿದೆ. ಇದು ಕೃಷಿ ಭೂಮಿಗೆ ಹಾನಿ ಮಾಡಬಹುದು. ಇತ್ತೀಚೆಗೆ ತೋಟಗಳಲ್ಲಿ ಹೆಚ್ಚಾಗಿರುವ ಎಲೆಚುಕ್ಕಿ ರೋಗಕ್ಕೆ ಕೊಟ್ಟಿಗೆ ಗೊಬ್ಬರದ ಕೊರತೆಯೂ ಒಂದು ಕಾರಣವೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಮಣ್ಣಿನ ಫಲವತ್ತತೆ ಮತ್ತು ಉತ್ತಮ ಇಳುವರಿಗಾಗಿ ಸ್ಥಳೀಯವಾಗಿ ಲಭ್ಯವಿರುವ ಕೊಟ್ಟಿಗೆ ಗೊಬ್ಬರವೇ ಉತ್ತಮ’ ಎಂದು ಸಲಹೆ ನೀಡಿದರು.

ಈ ವೇಳೆ ಧಾರವಾಡ ಸಹಕಾರ ಹಾಲು ಒಕ್ಕೂಟದ ಕಲ್ಯಾಣ ಸಂಘದ ವತಿಯಿಂದ ವಿದ್ಯಾರ್ಥಿ ಪ್ರೋತ್ಸಾಹಧನ ಯೋಜನೆಯಡಿ ಮಾಳಂಜಿ ಸಂಘದ ವಿನಯಕುಮಾರ ಕೃಷ್ಣ ನಾಯ್ಕ ಅವರಿಗೆ ₹5 ಸಾವಿರ ಚೆಕ್ ವಿತರಿಸಲಾಯಿತು. ಕಟ್ಟಡ ನಿರ್ಮಾಣಕ್ಕೆ ಮೊದಲ ಹಂತದ ₹2.70 ಲಕ್ಷ ಮೊತ್ತದ ಚೆಕ್ ವಿತರಿಸಲಾಯಿತು.ಕನಕಾಪುರ ಹಾಲು ಸಂಘದ ಅಧ್ಯಕ್ಷ ನಾಗೇಂದ್ರ ನಾಯ್ಕ, ಆಡಳಿತ ಮಂಡಳಿ ಸದಸ್ಯರು, ಕಾರ್ಯದರ್ಶಿ ಈಶ್ವರ ನಾಯ್ಕ, ಒಕ್ಕೂಟದ ವಿಸ್ತರಣಾಧಿಕಾರಿ ಮೌನೇಶ ಎಂ. ಸೋನಾರ, ವಿಸ್ತರಣಾ ಸಮಾಲೋಚಕ ಜಯಂತ ಪಟಗಾರ, ಮಾಳಂಜಿ ಹಾಲು ಸಂಘದ ನಿಕಟಪೂರ್ವ ಮುಖ್ಯ ಕಾರ್ಯನಿರ್ವಾಹಕ ಕೆ.ಜಿ. ನಾಯ್ಕ, ಹಾಲು ಉತ್ಪಾದಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-20-1060150000

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.