ಗುಂಡ್ಲುಪೇಟೆ: ತಾಲ್ಲೂಕಿನ ಪಶುಪಾಲನಾ ಇಲಾಖೆಯಿಂದ ಕಾಲು, ಬಾಯಿ ರೋಗ ತಡೆ ಲಸಿಕೆ ಹಾಕುವ 9ನೇ ಸುತ್ತಿನ ಅಭಿಯಾನ ಪ್ರಾರಂಭಿಸಲಾಯಿತು. ವೈದ್ಯರ ತಂಡ ಮನೆಗಳಿಗೆ ತೆರಳಿಗೆ ರಾಸುಗಳಿಗೆ ಚುಚ್ಚು ಮದ್ದು ನೀಡಿದರು.

ಪಶುವೈದ್ಯ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಮಾದೇಶ್ ಮಾತನಾಡಿ, ತಾಲ್ಲೂಕಿನ 62,126 ಜಾನುವಾರುಗಳಿಗೆ 9ನೇ ಸುತ್ತಿನ ಕಾಲುಬಾಯಿ ಲಸಿಕೆ ನೀಡುವುದು ಪ್ರಾರಂಭವಾಗಿದೆ. 6 ಪಶು ವೈದ್ಯರು, 11 ಪಶು ಪರೀಕ್ಷಕರು, 30 ಡಿ–ದರ್ಜೆ ನೌಕರು, ಇಲಾಖೆ ಸಿಬ್ಬಂದಿ ರೈತರ ಮನೆ ಬಾಗಿಲಿಗೆ ತೆರಳಿ ಲಸಿಕೆ ಹಾಕಲಿದ್ದಾರೆ. ಮಾಹಿತಿಯನ್ನು ಪಶುಧನ ತಂತ್ರಾಂಶದಲ್ಲಿ ದಾಖಲಿಸಲಾಗುತ್ತದೆ. ರೈತರು ಒಟಿಪಿ ನೀಡಬೇಕಾಗುತ್ತದೆ. ತಾಲ್ಲೂಕಿನ ಎಲ್ಲಾ ರೈತರು ಲಸಿಕೆ ಕಾರ್ಯಕ್ರಮಕ್ಕೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಜಾನುವಾರು ರೋಗ ನಿಯಂತ್ರಣ ರಾಷ್ಟ್ರೀಯ ಕಾರ್ಯಕ್ರಮದಡಿ ಪ್ರತಿ 6 ತಿಂಗಳಿಗೊಮ್ಮೆ ಕಾಲು, ಬಾಯಿ ರೋಗದ ಲಸಿಕೆ ಹಾಕಿಸುವುದು ಕಡ್ಡಾಯವಾಗಿದೆ. ಜಾನುವಾರುಗಳಿಗೆ ಈ ರೋಗ ಬಂದರೆ ರೈತರಿಗೆ ಆರ್ಥಿಕ ಸಂಕಷ್ಟಗಳನ್ನು ತಂದೊಡ್ಡುತ್ತದೆ. ಇದು ವೈರಾಣುವಿನಿಂದ ಬರುವ ಸಾಂಕ್ರಾಮಿಕ ಜಾಡ್ಯವಾಗಿದ್ದು, ಲಸಿಕೆ ಹಾಕಿಸುವುದರಿಂದ ರೋಗವನ್ನು ನಿಯಂತ್ರಿಸಲು ಸಾಧ್ಯವಾಗಲಿದೆ ಎಂದರು.

ರೋಗವು ಹಸು, ಎತ್ತು, ಹೋರಿ, ಎಮ್ಮೆಗೆ ಮಾರಕ ವಾಗಿದ್ದು, ಜಾನುವಾರುಗಳ ರಕ್ಷಣೆ, ಸುರಕ್ಷತೆ ಬಗ್ಗೆ ಒತ್ತು ನೀಡಲಾಗುತ್ತಿದೆ. ವರ್ಷದಲ್ಲಿ ಎರಡು ಬಾರಿ ಜಾನುವಾರುಗಳಿಗೆ ಲಸಿಕೆ ಹಾಕುವುದರಿಂದ ರೋಗ ತಡೆಗಟ್ಟಲು ಸಾಧ್ಯವಾಗುತ್ತದೆ. ಕರುಗಳಿಗೆ ತಪ್ಪದೆ 3 ರಿಂದ 5 ವಾರದೊಳಗೆ ಬೂಸ್ಟರ್ ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು.

ಪಶ ವೈದ್ಯರು, ಪಶು ಪರೀಕ್ಷಕರು ಹಾಗೂ ಇಲಾಖೆ ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-37-873408379

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.