ಅರಕಲಗೂಡು: ರೈತರು ಕೃಷಿಯ ಜತೆ ಹೈನುಗಾರಿಕೆಯನ್ನು ಅಳವಡಿಸಿಕೊಂಡರೆ ಆರ್ಥಿಕ ವೃದ್ಧಿಗೆ ಸಹಾಯಕವಾಗಲಿದೆ ಎಂದು ಶಾಸಕ ಎ. ಮಂಜು ತಿಳಿಸಿದರು.

ತಾಲ್ಲೂಕಿನ ಮಲ್ಲಿಪಟ್ಟಣ ಹೋಬಳಿ ಗೇರುಕುಪ್ಪೆ ಗ್ರಾಮದಲ್ಲಿ ಸೋಮವಾರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಹೈನುಗಾರಿಕೆ ರೈತನ ಕೈಹಿಡಿಯುವಲ್ಲಿ ಯಶಸ್ವಿಯಾಗಿದೆ. ಕೃಷಿಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿ ಅವರು ಉತ್ತಮ ಬದುಕು ಕಟ್ಟಿಕೊಳ್ಳುವಂತೆ ನೋಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಗ್ರಾಮಕ್ಕೆ ಬಿಎಂಸಿ ಕೇಂದ್ರ ತೆರೆಯಲು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಸಂಘದ ಅಧ್ಯಕ್ಷೆ ಹೇಮಲತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಾಸನ ಹಾಲು ಒಕ್ಕೂಟದ ನಿರ್ದೇಶಕ ಕೆ. ಸತೀಶ್, ಹಾಲು ಒಕ್ಕೂಟದ ಅಧಿಕಾರಿ ಸೌಜನ್ಯ, ವಿಸ್ತರಣಾಧಿಕಾರಿ ಗಂಗಾಧರ್ ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-36-542815671

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.