ಸವಣೂರು (ಹಾವೇರಿ): ‘ಜಾನುವಾರುಗಳಿಗೆ ಸಕಾಲದಲ್ಲಿ ಚಿಕಿತ್ಸೆ ದೊರೆಯುತ್ತಿಲ್ಲ. ವೈದ್ಯರು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಜಾನುವಾರುಗಳ ಜೀವಕ್ಕೆ ಹಾನಿಯಾಗುತ್ತಿದೆ’ ಎಂದು ಆರೋಪಿಸಿ ರೈತರು ಶುಕ್ರವಾರ ದಿಢೀರ್ ಪ್ರತಿಭಟನೆ ನಡೆಸಿದರು.

ಪಟ್ಟಣದಲ್ಲಿರುವ ಪಶು ಇಲಾಖೆಯ ಪಶು ಆಸ್ಪತ್ರೆಗೆ ಮುತ್ತಿಗೆ ಹಾಕಿದ ರೈತರು, ತಮ್ಮ ಆಕ್ರೋಶ ಹೊರಹಾಕಿದರು. ಆಸ್ಪತ್ರೆಯಲ್ಲಿ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಮಾಡುವಂತೆಯೂ ಆಗ್ರಹಿಸಿದರು.

‘ಆಸ್ಪತ್ರೆಯ ಅವ್ಯವಸ್ಥೆ, ಸಿಬ್ಬಂದಿ ಕೊರತೆ ಹಾಗೂ ವೈದ್ಯರ ನಿರ್ಲಕ್ಷ್ಯದ ಕುರಿತು ರೈತರು, ಪಶು ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಜಾನುವಾರುಗಳನ್ನು ಆಸ್ಪತ್ರೆಗೆ ಕರೆತಂದರೂ ಚಿಕಿತ್ಸೆ ಸಿಗುವುದಿಲ್ಲ. ವೈದ್ಯರು ಹಾಗೂ ಸಿಬ್ಬಂದಿ ಆಸ್ಪತ್ರೆಯಲ್ಲಿ ಇರುವುದಿಲ್ಲ. ಈ ನಿರ್ಲಕ್ಷ್ಯದಿಂದ ಅಮಾಯಕ ಮೂಕಪ್ರಾಣಿಗಳ ಜೀವ ಹೋಗುತ್ತಿದೆ’ ಎಂದು ಆರೋಪಿಸಿದ್ದರು. ಆದರೆ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

‘ಪಶು ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಬೇಕು. ತಹಶೀಲ್ದಾರರು ಸ್ಥಳಕ್ಕೆ ಬಂದು, ಅಹವಾಲು ಸ್ವೀಕರಿಸಬೇಕು. ಅಲ್ಲಿಯವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ’ ಎಂದು ರೈತರು ಪಟ್ಟು ಹಿಡಿದರು.

ಸ್ಥಳಕ್ಕೆ ಬಂದ ಪಶು ಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ. ನೀಲಕಂಠ ಹವಳದ ಅವರನ್ನು ತರಾಟೆಗೆ ತೆಗೆದುಕೊಂಡ ರೈತರು, ‘ಸರ್ಕಾರದಿಂದ ಉಚಿತವಾಗಿ ಬರುವ ಔಷಧಿಗಳನ್ನು ಆಸ್ಪತ್ರೆಯಲ್ಲಿ ನೀಡದೇ ಹೊರಗೆ ಬರೆದು ಕೊಡುತ್ತಿರುವುದು ಏಕೆ? ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಸಿಗುವುದಿಲ್ಲವೇಕೆ? ರೈತರು ಯಾರನ್ನು ಸಂಪರ್ಕಿಸಬೇಕು’ ಎಂದು ಪ್ರಶ್ನಿಸಿದರು.

ಸ್ಥಳಕ್ಕೆ ಬಂದ ತಹಶೀಲ್ದಾರ ರವಿಕುಮಾರ ಕೊರವರ, ಪ್ರತಿಭಟನಾಕಾರರೊಂದಿಗೆ ಚರ್ಚಿಸಿದರು. ‘ವೈದ್ಯರ ನಿರ್ಲಕ್ಷ್ಯ ಮತ್ತು ಸಕಾಲದಲ್ಲಿ ಚಿಕಿತ್ಸೆ ಸಿಗದೇ ಹಲವು ಜಾನುವಾರು ಮೃತಪಟ್ಟಿವೆ. ರೈತರಿಗೆ ಜಾನುವಾರು ಕೇವಲ ಆಸ್ತಿಯಲ್ಲ. ಅವು ಕುಟುಂಬದ ಸದಸ್ಯರು. ಅವುಗಳ ನೋವು ರೈತರ ಬದುಕಿನ ನೋವು. ಇಂತಹ ಮೂಕಪ್ರಾಣಿಗಳ ಬಗ್ಗೆ ಕನಿಷ್ಠ ಮಾನವಿಯತೆ ತೋರದ ಅಧಿಕಾರಿಗಳ ನಡೆ ಖಂಡನೀಯ’ ಎಂದು ಹೇಳಿದರು.

‘ಮುಂದಿನ ಎಂಟು ದಿನದೊಳಗಾಗಿ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಬೇಕು. ಇಲ್ಲದಿದ್ದರೆ, ಎಲ್ಲ ರೈತರು ಜಾನುವಾರುಗಳ ಸಮೇತ ಕಂದಾಯ ಇಲಾಖೆ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಅದಕ್ಕೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ರವಿಕುಮಾರ, ‘ಆಸ್ಪತ್ರೆಯ ಆಡಳಿತಾಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ಮುಂದಿನ ದಿನಗಳಲ್ಲಿ ರೈತರಿಗೆ ಹಾಗೂ ಜಾನುವಾರುಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು. ಬಳಿಕವೇ ರೈತರು ಪ್ರತಿಭಟನೆ ಹಿಂಪಡೆದರು.

ಮುಖಂಡರಾದ ರಾಜು ಪೀತಾಂಬ್ರಶೆಟ್ಟಿ, ಗಣೇಶ ಗಾಣಗೇರ, ವೀರನಗೌಡ ಪಾಟೀಲ, ಸಂತೋಷ ಗಾಡದ, ಈರಣ್ಣ ಕಾಳಶೆಟ್ಟಿ, ಬಸನಗೌಡ ಪಾಟೀಲ, ಭರಮನಗೌಡ ಮುದಿಗೌಡ್ರ, ಬಸನಗೌಡ ಪಾಟೀಲ, ಅಜಿತ್ ಗಾಣಗೇರ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-22-1437273918

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.