ಹೂವಿನಹಡಗಲಿ: ‘ಗ್ರಾಮೀಣ ಭಾಗದ ಮಹಿಳೆಯರ ಸ್ವಾವಲಂಬಿ ಬದುಕಿಗೆ ಸಂಜೀವಿನಿ ಒಕ್ಕೂಟ ಸಹಕಾರಿಯಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾಧಿಕಾರಿ ಎಂ. ಉಮೇಶ ಹೇಳಿದರು.

ಇಲ್ಲಿನ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ಜಿಲ್ಲಾ ಪಂಚಾಯಿತಿ, ಎನ್ಆರ್ಎಲ್ಎಂ ಸಂಜೀವಿನಿ ಕುಕ್ಕುಟ ಮಹಾ ಮಂಡಳ, ಪಶು ವೈದ್ಯಕೀಯ ಸೇವಾ ಇಲಾಖೆ ಸಹಯೋಗದಲ್ಲಿ ಕುಕ್ಕುಟ ಸಾಕಣೆ ಕುರಿತಾಗಿ ಮಹಿಳೆಯರಿಗೆ ಬುಧವಾರ ಆಯೋಜಿಸಿದ್ದ ಮೂರು ದಿನಗಳ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಕುಕ್ಕುಟ ಸಂಜೀವಿನಿ, ಮತ್ಸ್ಯ ಸಂಜೀವಿನಿ, ಸಮಗ್ರ ಕೃಷಿ ಸಮೂಹ ಕಾರ್ಯಕ್ರಮಗಳು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಅನುಕೂಲಕಾರಿಯಾಗಿವೆ. ಕೋಳಿ ಸಾಕಣೆಯು ಉತ್ತಮ ಆದಾಯ ನೀಡಲಿದೆ. ಸ್ವಸಹಾಯ ಸಂಘಗಳ ಮಹಿಳೆಯರು ವಿವಿಧ ವಸ್ತುಗಳನ್ನು ಉತ್ಪಾದಿಸಿ, ಲಾಭ ಗಳಿಸಬೇಕು’ ಎಂದು ಸಲಹೆ ನೀಡಿದರು.

ಕಾರ್ಯಕ್ರಮ ವ್ಯವಸ್ಥಾಪಕ ಪ್ರಸನ್ನ ಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪರಮೇಶ್ವರ, ಪಶು ವೈದ್ಯಕೀಯ ಸೇವಾ ಇಲಾಖೆ ಸಹಾಯಕ ನಿರ್ದೇಶಕ ನಾರಾಯಣ ಬಣಕಾರ, ಪಶು ವೈದ್ಯಾಧಿಕಾರಿ ಡಾ. ಚಿದಾನಂದ ರೆಡ್ಡಿ, ಡಾ. ವೆಂಕಟೇಶ, ಧರ್ಮಾನಾಯ್ಕ, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಮುಖ್ಯಸ್ಥರಾದ ಸಿ.ಎಂ. ಕಾಲಿಬಾವಿ, ಮಂಜುನಾಥ, ಜಿ.ಪಂ ಎನ್ಆರ್ಎಲ್ಎಂ ಶರಣಪ್ಪ, ವಲಯ ಮೇಲ್ವಿಚಾರಕ ಬಸವರಾಜ ತಳಕಲ್ಲು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-25-1778139241

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.