ಚಿಂತಾಮಣಿ: ವಿಶ್ವ ಹಾಲು ದಿನಾಚರಣೆ ಅಂಗವಾಗಿ ಸೋಮವಾರ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಾಲು ವಿತರಿಸಲಾಯಿತು.

ಚಿಮುಲ್ ನಿರ್ದೇಶಕ ಅಶ್ವತ್ಥನಾರಾಯಣಬಾಬು ಮಾತನಾಡಿ, ‘ಹಾಲು ಉತ್ಪಾದನೆಯಲ್ಲಿ ವಿಶ್ವದಲ್ಲಿ ಭಾರತವು 2ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ 15 ಒಕ್ಕೂಟಗಳು ಕಾರ್ಯಾರಂಭ ಮಾಡುತ್ತಿವೆ. ಲಕ್ಷಾಂತರ ರೈತರು ಉದ್ದಿಮೆಯಲ್ಲಿ ತೊಡಗಿಸಿಕೊಂಡು ಜೀವನ ಕಟ್ಟಿಕೊಂಡಿದ್ದಾರೆ’ ಎಂದು ಹೇಳಿದರು.

ಹಾಲು ಉತ್ಪಾದನೆಯಲ್ಲಿ ತೊಡಗಿಸಿಕೊಂಡು ಮಹಿಳೆಯರು ಸಬಲೀಕರಣವಾಗುತ್ತಿದ್ದಾರೆ. ಸರ್ಕಾರವು ಲೀಟರ್ಗೆ ₹5 ಬೆಂಬಲ ಬೆಲೆ ನೀಡುತ್ತಿದೆ. ಪ್ರತಿ 15 ದಿನಗಳಿಗೊಮ್ಮೆ ಹಣ ಪಾವತಿಯ ಗ್ಯಾರಂಟಿ ಇರುವುದರಿಂದ ಹೆಚ್ಚಿನ ರೈತರು ಬೇರೆ ಕ್ಷೇತ್ರಗಳನ್ನು ತ್ಯಜಿಸಿ ಹಾಲು ಉತ್ಪಾದನೆಯತ್ತ ಮುಖ ಮಾಡುತ್ತಿದ್ದಾರೆ ಎಂದರು.

ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ದೊಡ್ದ ಒಕ್ಕೂಟಗಳಾಗಿವೆ. ಜಿಲ್ಲೆಯಲ್ಲಿ ಪ್ರತಿನಿತ್ಯ ಜಿಲ್ಲೆಯಲ್ಲಿ 5 ಲಕ್ಷ ಲೀಟರ್, ತಾಲ್ಲೂಕಿನಲ್ಲಿ 1.5 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಇದಕ್ಕೆ ಮಹಿಳೆಯರ ಪರಿಶ್ರಮ, ಡೇರಿಗಳ ಆಡಳಿತ ಮಂಡಳಿಗಳು, ಸಿಬ್ಬಂದಿ, ಒಕ್ಕೂಟದ ಅಧಿಕಾರಿಗಳೇ ಕಾರಣ ಎಂದರು.

ಕೆಂಚಾರ್ಲಹಳ್ಳಿ ಕ್ಷೇತ್ರದ ನಿರ್ದೇಶಕ ಕೃಷ್ಣಾರೆಡ್ಡಿ, ಕೆ.ಎನ್. ಆವುಲಪ್ಪ ಮಾತನಾಡಿದರು. ನಿರ್ದೇಶಕಿ ಸುಮಾ ರವಿಚಂದ್ರನ್, ಚಿಂತಾಮಣಿ ಉಪ ವಿಭಾಗದ ವ್ಯವಸ್ಥಾಪಕ ಡಾ.ಮಹೇಶ್, ಪಶುಪ್ರಯೋಗಾಲಯದ ಡಾ. ಕಾವ್ಯ, ವಿಸ್ತರಣಾಧಿಕಾರಿಗಳು, ಡೇರಿಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಆಸ್ಪತ್ರೆ ಆಡಳಿತಾಧಿಕಾರಿ ಡಾ.ಸಂತೋಷ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-16-212809310

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.