ನುಗ್ಗೇಹಳ್ಳಿ: ‘ರಾಜ್ಯದಲ್ಲಿ ಹೈನುಗಾರಿಕೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪ್ರಸ್ತುತ ಸಾಲಿನಲ್ಲಿ ₹8.05 ಕೋಟಿ ಅನುದಾನ ನೀಡಲಾಗಿದೆ’ ಎಂದು ಯೋಜನೆಯ ಚನ್ನರಾಯಪಟ್ಟಣ ಜಿಲ್ಲಾ ನಿರ್ದೇಶಕಿ ಲೀಲಾವತಿ ತಿಳಿಸಿದರು.

ಶ್ರವಣಬೆಳಗೊಳ ಯೋಜನಾ ಕಚೇರಿ ವ್ಯಾಪ್ತಿಯ ಹೋಬಳಿಯ ಕಲ್ಕೆರೆ ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಯೋಜನೆಯಿಂದ ನೀಡಲಾಗಿದ್ದ ₹2 ಲಕ್ಷ ಸಹಾಯಧನದ ಡಿಡಿಯನ್ನು ಸಂಘದ ಆಡಳಿತ ಮಂಡಳಿಗೆ ಹಸ್ತಾಂತರಿಸಿ ಮಾತನಾಡಿದರು.

‘ರಾಜ್ಯದ ಹೈನುಗಾರಿಕೆ ಬಲವರ್ಧನೆಗೊಳ್ಳಲು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಡೇರಿ ಕಟ್ಟಡ ನಿರ್ಮಾಣ ಮಾಡಲು ₹1.50 ಲಕ್ಷದಿಂದ ₹3 ಲಕ್ಷದವರೆಗೆ ಸಹಾಯಧನ ನೀಡುತ್ತಾ ಬರಲಾಗುತ್ತಿದೆ. ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಡೇರಿ ಕಟ್ಟಡ ನಿರ್ಮಾಣಕ್ಕೆ ಹೆಚ್ಚು ಸಹಕಾರಿಯಾಗುತ್ತಿದೆ’ ಎಂದರು.

‘ಹೈನುಗಾರಿಕೆ, ಶಿಕ್ಷಣ, ಕೆರೆ ಅಭಿವೃದ್ಧಿ, ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಲು ಪ್ರತಿ ವರ್ಷವೂ ಅನುದಾನ ಕೊಡುವ ಮೂಲಕ ಹೆಚ್ಚಿನ ಸಹಕಾರ ನೀಡಲಾಗುತ್ತಿದೆ’ ಎಂದು ಹೇಳಿದರು.

ಕಲ್ಕೆರೆ ಹಾಲು ಉತ್ಪಾದಕರ ಮಹಿಳಾ ಸಂಘದ ಅಧ್ಯಕ್ಷೆ ಸಾವಿತ್ರಮ್ಮ ರಮೇಶ್ ಮಾತನಾಡಿದರು. ಯೋಜನಾಧಿಕಾರಿ ಕೆ.ಪುರಂದರ, ಸಂಘದ ಅಧ್ಯಕ್ಷರಾದ ಮಂಜುಳಾ ತಿಮ್ಮೇಗೌಡ, ಸಾವಯವ ಕೃಷಿಕ ಗಣೇಶ್, ವಲಯ ಮೇಲ್ವಿಚಾರಕ ರಮೇಶ್, ಕೃಷಿ ಮೇಲ್ವಿಚಾರಕ ಲಿಂಗರಾಜು, ಸೇವಾ ಪ್ರತಿನಿಧಿ ಮಂಜೇ ಗೌಡ, ನಿರ್ದೇಶಕರು, ಸದಸ್ಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-36-34002212

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.