ವೇಮಗಲ್: ಹೋಬಳಿಯ ಕದರೀಪುರ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ರಾಸುಗಳಿಗೆ ಕಾಲು ಬಾಯಿ ಜ್ವರ ಹಾಗೂ ಚರ್ಮಗಂಟು ರೋಗದ ಲಸಿಕಾ ಅಭಿಯಾನ ನಡೆಯಿತು.

ಈ ವೇಳೆ ಪಶು ವೈದ್ಯಾಧಿಕಾರಿ ಡಾ.ನಿತ್ಯಾನಂದ ಮಾತನಾಡಿ, ಬೇಸಿಗೆಯಲ್ಲಿ ತಾಪಮಾನ ವಿಪರೀತ ಏರಿಕೆಯಾಗುತ್ತಿದ್ದು, ಈ ವೇಳೆ ಜಾನುವಾರುಗಳ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ವಹಿಸುವುದು ಅತ್ಯಗತ್ಯ ಎಂದರು.

ಬಿಸಿಲಿನ ತಾಪದಿಂದ ರಾಸುಗಳನ್ನು ರಕ್ಷಿಸಲು ತಂಪಾದ ಜಾಗದಲ್ಲಿ ಇರಿಸಬೇಕು. ಪೌಷ್ಟಿಕಾಂಶಯುಕ್ತ ಹಸಿ ಮೇವನ್ನು ಆಹಾರವಾಗಿ ನೀಡಬೇಕು. ಜೊತೆಗೆ ಹಸುಗಳಿಗೆ ವಿಮೆ ಮಾಡಿಸಿ ಎಂದು ಕಿವಿಮಾತು ಹೇಳಿದರು.

ಮದ್ದೇರಿ ಪಶು ಆಸ್ಪತ್ರೆಯ ವ್ಯಾಪ್ತಿಯು ಸುಮಾರು 20 ಹಳ್ಳಿಗಳನ್ನು ಒಳಗೊಂಡಿದ್ದು, ಎಲ್ಲಾ ಗ್ರಾಮಗಳಲ್ಲಿ ಲಸಿಕೆ ಹಾಕಲಾಗುವುದು. ಹಾಗಾಗಿ ಗ್ರಾಮದ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸಿ ಎಂದರು.

ಆಸ್ಪತ್ರೆಯ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಜಾನುವಾರುಗಳ ಆರೋಗ್ಯ ತಪಾಸಣೆ ನಡೆಸಿ, ಬೇಸಿಗೆ ಕಾಲದಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿದರು.

ಪಶು ವೈದ್ಯಕೀಯ ಪರಿವೀಕ್ಷಕ ಮಂಜುನಾಥ್, ಕಿರಿಯ ಪಶು ವೈದ್ಯಕೀಯ ಪರಿವೀಕ್ಷಕ ಸುನೀಲ್, ಇಲಾಖೆಯ ಸಿಬ್ಬಂದಿ ವೆಂಕಟೇಶ್, ರಾಜು, ನಾಗರಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-18-1121431112

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.