ಕೋಲಾರ: ಕೋಳಿ ಸಾಕಣೆ ರೈತರಿಗೆ ಕನಿಷ್ಠ ಸಾಕಣೆ ವೆಚ್ಚವಾಗಿ ₹ 10 ನಿಗದಿ ಮಾಡಿರುವ ರಾಜ್ಯ ಸರ್ಕಾರದ ಆದೇಶವು ಸ್ವಾಗತ. ಆದರೆ, ಮುಂದಿನ ದಿನಗಳಲ್ಲಿ ಸ್ವಾಮಿನಾಥನ್ ಆಯೋಗದ ಪ್ರಕಾರವೇ ಸಾಕಣೆ ವೆಚ್ಚವನ್ನು ₹20ಕ್ಕೆ ಹೆಚ್ಚಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯ ಕೋಳಿ ಸಾಕಣೆ ರೈತರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಗಟೂರು ಶ್ರೀಧರ್ ರೆಡ್ಡಿ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಕೋಳಿ ಸಾಕಣೆ ನೂರಾರು ಜನರ ಕಸುಬಾಗಿದೆ ಸಂಘದ ಮುಖಂಡರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಕೇಂದ್ರ ಸರ್ಕಾರದ ಮಾನದಂಡಗಳನ್ನು ಪರಿಗಣಿಸಬೇಕೆಂದು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅದರಂತೆ ಸಾಕಣೆ ವೆಚ್ಚ ನಿಗದಿ ಮಾಡಬೇಕು’ ಎಂದು ಒತ್ತಾಯಿಸಿದರು.

ಎಂಟು ತಿಂಗಳಿಂದ ಕೋಳಿ ಸಾಕಣೆ ದರವಾಗಿ ಕೆ.ಜಿಗೆ ಕನಿಷ್ಠ ₹ 20 ನಿಗದಿ ಮಾಡುವಂತೆ ಕೋಳಿ ಸಾಕಣೆ ರೈತರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಹೋರಾಟ ಮಾಡಲಾಯಿತು. ಮಧ್ಯಂತರ ದರವಾಗಿ ₹ 10 ನಿಗದಿಪಡಿಸಲು ಆಯುಕ್ತರಿಗೆ ರಾಜ್ಯ ಸರ್ಕಾರ ಆದೇಶಿಸಿದೆ. ಆದರೆ, ಅದು ಸಾಲದು. ₹ 20 ನಿಗದಿ ಮಾಡಲು ಮನವಿ ಸಲ್ಲಿಸಲಾಗಿದೆ. ಇದರ ಜೊತೆಗೆ ಕಡಿಮೆ ಬಡ್ಡಿ ದರದಲ್ಲಿ ಕೋಳಿ ಸಾಕಣೆ ರೈತರಿಗೆ ಸಾಲ ಸೌಲಭ್ಯ, ಸಹಾಯಧನ ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಎನ್.ಎನ್.ಶ್ರೀರಾಮ್ ಮಾತನಾಡಿ, ‘ಕೋಳಿ ಸಾಕಣೆಯನ್ನು ಕೃಷಿ ಎಂದು ಪರಿಗಣಿಸಬೇಕು. ಈಗಾಗಲೇ ಶಾಸಕರು, ಪರಿಷತ್ ಸದಸ್ಯರಿಗೆ ಮನವಿ ನೀಡಲಾಗಿತ್ತು’ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಪ್ರಕಾಶ್ ರೆಡ್ಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಎಂ.ವೆಂಕಟರಾಮರೆಡ್ಡಿ, ಕೋಲಾರ ತಾಲ್ಲೂಕು ಅಧ್ಯಕ್ಷ ಎಸ್.ಆರ್.ವೆಂಕಟೇಶ್, ಕಾರ್ಯದರ್ಶಿ ವೆಂಕಟೇಶ್, ಪದಾಧಿಕಾರಿಗಳಾದ ರಾಜಾರೆಡ್ಡಿ, ವೇಣುಗೋಪಾಲ್, ರಮೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-18-2141573645

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.