ಕೊಪ್ಪ: ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಎನ್.ಎಲ್.ಎಂ ತಾಲ್ಲೂಕು ಅಭಿಯಾನ ನಿರ್ವಹಣ ಘಟಕ, ಮೀನುಗಾರಿಕೆ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಸಹಯೋಗದಲ್ಲಿ ಮತ್ಸ್ಯ ಸಂಜೀವಿನಿ ಯೋಜನೆಯಡಿ, ಮಹಿಳಾ ಸ್ವ–ಸಹಾಯ ಸಂಘಗಳಿಗೆ ಗ್ರಾಮ ಪಂಚಾಯಿತಿ ಕೆರೆಗಳಲ್ಲಿ ಮೀನು ಸಾಕಾಣಿಕೆ ಕುರಿತಾದ ಎರಡು ದಿನಗಳ ಮಾಹಿತಿ ತರಬೇತಿ ಉದ್ಘಾಟನೆ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಚ್.ಡಿ. ನವೀನ್ ಕುಮಾರ್, ‘ಮೀನು ಸಾಕಾಣಿಕೆ, ಅದರ ಮಹತ್ವ, ನಿರ್ವಹಣೆ, ಪಾಲಿಸಬೇಕಾಗಿರುವ ನಿಯಮಗಳ ಕುರಿತು ತಿಳಿಸಿದ ಅವರು, ಎನ್.ಆರ್.ಎಲ್.ಎಂ ಯೋಜನೆಯಡಿ ಮಹಿಳಾ ಸ್ವ–ಸಹಾಯ ಸಂಘದ ಸದಸ್ಯರಿಗೆ ಹಲವಾರು ತರಬೇತಿ ನೀಡಲಾಗಿದ್ದು, ತರಬೇತಿ ಪಡೆದು ಜೀವನೋಪಾಯ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಯಶಸ್ವಿಯಾಗಿ ಮೀನು ಸಾಕಾಣಿಕೆ ಮಾಡಬೇಕು’ ಎಂದರು.

ತಾಲ್ಲೂಕಿನ ಸ್ವ–ಸಹಾಯ ಸಂಘದ ಕಾರ್ಯಕ್ರಮ ವ್ಯವಸ್ಥಾಪಕ ನವೀನ್ ಎಸ್.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಚೇತನ್, ಒಕ್ಕೂಟದ ಅಧ್ಯಕ್ಷೆ ಮಂಜುಳಾ ಮಾತನಾಡಿದರು.

ಚಿಕ್ಕಮಗಳೂರಿನ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಅಮೃತ್ ಅವರು, ಮೀನು ಸಾಕಾಣಿಕೆ ಹಾಗೂ ವಿವಿಧ ಮೀನುಗಳ ವಿಧಗಳು, ಅವುಗಳ ಬೆಳವಣಿಗೆ ಕುರಿತು, ಮಾರುಕಟ್ಟೆ ವ್ಯವಸ್ಥೆ, ಮೀನು ಸಾಕಾಣಿಕೆ ಸಂದರ್ಭದಲ್ಲಿ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ನೀಡಿದರು.

ಇಲಾಖೆ ಅಧಿಕಾರಿಗಳು, ತಾಲ್ಲೂಕು ಅಭಿಯಾನ ನಿರ್ವಹಣ ಘಟಕದ ಸಿಬ್ಬಂದಿ, ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಸ್ವಸಹಾಯ ಸಂಘಗಳ ಸದಸ್ಯರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-126-121293331

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.