ಕೆ.ಆರ್.ಪೇಟೆ: ಹಾಲು ಉತ್ಪಾದಕರು ಕಡ್ಡಾಯವಾಗಿ ತಮ್ಮ ಜಾನುವಾರುಗಳಿಗೆ ವಿಮೆ ಮಾಡಿಸುವ ಮೂಲಕ ಭವಿಷ್ಯದ ಆರ್ಥಿಕ ಸಂಕಷ್ಟದಿಂದ ಪಾರಾಗಬೇಕು ಎಂದು ಮನ್ಮುಲ್ ನಿರ್ದೇಶಕ ಡಾಲು ರವಿ ಹೇಳಿದರು.

ಪಟ್ಟಣದ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಉಪ ಕಚೇರಿಯಲ್ಲಿ ಮರಣ ಹೊಂದಿದ ರಾಸುಗಳಿಗೆ ಪರಿಹಾರ, ಡೇರಿ ಕಟ್ಟಡಕ್ಕೆ ಒಕ್ಕೂಟದಿಂದ ನೀಡುವ ಅನುದಾನ ವಿತರಣೆ ಸಮಾರಂಭದಲ್ಲಿ ಮಾತನಾಡಿದರು.

‘ರೈತರು ಮತ್ತು ಹೈನು ಉತ್ಪಾದಕರು ಆರ್ಥಿಕ ಸಂಕಷ್ಟದಿಂದ ಹೊರಬರಬೇಕಾದರೆ ಮೊದಲು ತಮ್ಮ ರಾಸುಗಳಿಗೆ, ತಮಗೆ ವಿಮಾ ಪಾಲಿಸಿ ಮಾಡಿಸಿರಬೇಕು. ಆಗ ಏನೇ ದುರ್ಘಟನೆ ಸಂಭವಿಸಿದರೂ ಆರ್ಥಿಕ ಸಂಕಷ್ಟದಿಂದ ಪಾರಾಗಲು ಸಾಧ್ಯವಿದೆ. ರಾಸುಗಳ ಸಾವು ಆಕಸ್ಮಿಕ, ಮನ್ಮುಲ್ವತಿಯಿಂದ ನೀಡಲಾಗುತ್ತಿರುವ ಪರಿಹಾರದಿಂದ ಕೊಂಚವಾದರೂ ನೆಮ್ಮದಿ ಸಿಗಲಿದೆ’ ಎಂದರು.

‘ಹಾಲಿನ ಡೇರಿಯ ಸುಂದರ ಕಟ್ಟಡ ನಿರ್ಮಾಣ ಮಾಡಿದರೆ ಸಾಲದು, ಅದನ್ನು ಉತ್ತಮವಾಗಿ ನಿರ್ವಹಿಸಿ ಆರ್ಥಿಕವಾಗಿ ನಷ್ಟವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಎಲ್ಲಾ ಷೇರುದಾರರ ಮೇಲೆ ಇದೆ. ಗುಣಮಟ್ಟದ ಹಾಲನ್ನು ಸರಬರಾಜು ಮಾಡುವುದರೊಂದಿಗೆ ರಾಜಕಾರಣ ಬೆರಸದೆ ಆಡಳಿತ ನಡೆಸಬೇಕು’ ಎಂದು ಸಲಹೆ ನೀಡಿದರು.

ಮನ್ಮುಲ್ ಉಪ ವ್ಯವಸ್ಥಾಪಕ ಪ್ರಸಾದ್, ಮಾರ್ಗ ವಿಸ್ತರಣಾಧಿಕಾರಿಗಳಾದ ಮಧು, ಸಂಧ್ಯಾ, ಜಗದೀಶ್, ಶಶಿಕುಮಾರ್, ನಾಗಪ್ಪ ಅಲ್ಲಿಬಾದಿ, ಭಾವನಾ, ಡಾ.ಪ್ರಜ್ವಲ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-40-2102972892

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.