ನಂಜನಗೂಡು: ‘ರೈತರು ಕೃಷಿ ಚಟುವಟಿಕೆಯ ಜೊತೆಗೆ ಹೈನುಗಾರಿಕೆ ಮಾಡಬೇಕು. ಇದರಿಂದ ಆದಾಯದೊಂದಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬಹುದು’ ಎಂದು ಪಶುಸಂಗೋಪನ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಎಚ್.ಮೋಹನ್ ಹೇಳಿದರು.

ನಗರದ ಗೌರಿಘಟ್ಟದ ಬೀದಿಯ ಸಮುದಾಯ ಭವನದಲ್ಲಿ ಪಶುಸಂಗೋಪನೆ ಇಲಾಖೆ ಸಹಯೋಗದೊಂದಿಗೆ ಗಂಗಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ಕುರಿ ಹಸು ಮತ್ತು ಮೇಕೆ ಸಾಕಾಣಿಕೆ ಉಚಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ರಾಜ್ಯ ಮತ್ತು ಕೇಂದ್ರ ಸರ್ಕಾರ ರೈತರ ಆದಾಯ ಹೆಚ್ಚಿಸುವ ಸಲುವಾಗಿ ರೈತರಿಗೆ ಕುರಿ- ಮೇಕೆ ಸಾಕಣೆ, ಕೋಳಿ ಸಾಕಣೆ, ಹಾಗೂ ಹಾಲು ಉತ್ಪಾದನೆ, ಡೇರಿ ಫಾರ್ಮಿಂಗ್ ಬಗ್ಗೆ ಉಚಿತ ತರಬೇತಿ ನೀಡಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುತ್ತಿವೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಗಂಗಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ರಾಜ್ಕಾಮಯ್ಯ, ಕಾರ್ಯದರ್ಶಿ ದಿವ್ಯಶ್ರೀ, ಕರ್ನಾಟಕ ಗ್ರಾಮೀಣ ಬ್ಯಾಂಕ್ನ ಪ್ರಾದೇಶಿಕ ವ್ಯವಸ್ಥಾಪಕಿ ಎಚ್.ಎಸ್.ತ್ರಿವೇಣಿ, ಎಸ್ಬಿಐ ಮುಖ್ಯ ವ್ಯವಸ್ಥಾಪಕ ಮನೋಜ್ ಕುಮಾರ್, ತಾಲ್ಲೂಕು ನಾಯಕ ಸಮುದಾಯ ಅಧ್ಯಕ್ಷ ಕೆ.ನಾಗರಾಜು, ಹನುಮಂತನಾಯಕ, ಶಶಾಂಕ್, ಮಂಜುಳಾ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-38-1588163187

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.