ಶಿಡ್ಲಘಟ್ಟ: ತಾಲ್ಲೂಕಿನ ಮಳಮಾಚನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಚೇರಿ ಆವರಣದಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಜಾನುವಾರುಗಳಿಗೆ ಕಾಲುಬಾಯಿ ಜ್ವರ ಲಸಿಕಾ ಅಭಿಯಾನವನ್ನು ಶನಿವಾರ ಆಯೋಜಿಸಲಾಯಿತು.

ಶಾಸಕ ಬಿ.ಎನ್. ರವಿಕುಮಾರ್ ಮಾತನಾಡಿ, ‘ಕಾಲುಬಾಯಿ ಜ್ವರ ಲಸಿಕಾ ಅಭಿಯಾನವು ನಮ್ಮ ಕೃಷಿ ಹೈನುಗಾರಿಕೆ ಮತ್ತು ನಮ್ಮ ಕುಟುಂಬದ ಜೀವನಾಧಾರ ರಕ್ಷಿಸುವ ಒಂದು ದೊಡ್ಡ ಹೆಜ್ಜೆಯಾಗಿದೆ’ ಎಂದು ಹೇಳಿದರು.

ಕಾಲುಬಾಯಿ ಜ್ವರವು ಹಾಲಿನ ಉತ್ಪಾದನೆ, ಹೈನುಗಾರಿಕೆ ಆದಾಯ ಮತ್ತು ರೈತರ ಜೀವನದ ಮೇಲೆ ಗಂಭೀರ ಪ್ರಭಾವ ಬೀರುತ್ತದೆ. ಜಾನುವಾರುಗಳಿಗೆ ನಿಯಮಿತವಾಗಿ ಲಸಿಕೆ ಹಾಕಿಸುವುದರಿಂದ ರೋಗ ಬರದಂತೆ ತಡೆಯಲು ಸಾಧ್ಯವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಡಿಜಿಟಲ್ ಎಐ ಗನ್ ವಿತ್ ಕ್ಯಾಮೆರಾ, ರಾಸುಗಳ ವಿಮಾ ಚೆಕ್ ವಿತರಣೆ, ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಗಣಕ ಯಂತ್ರಗಳನ್ನು ವಿತರಿಸಲಾಯಿತು.

ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ, ಹುಜಗೂರು ರಾಮಯ್ಯ, ಚಿಮುಲ್ ಶಿಡ್ಲಘಟ್ಟ ಶಿಬಿರದ ಉಪ ವ್ಯವಸ್ಥಪಕ ಡಾ. ಬಿ. ಆರ್.ರವಿಕಿರಣ್, ಸಹಾಯಕ ನಿರ್ದೇಶಕ ಡಾ. ವಿ. ಶ್ರೀನಾಥ್ ರೆಡ್ಡಿ, ಸಂಘದ ಅಧ್ಯಕ್ಷ ದ್ಯಾವಪ್ಪ, ಸಿ.ಇ.ಒ ಎಂ. ವಿನಯ್ ಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಜಯಮ್ಮ ಗೋಪಾಲ್, ಎಂ. ಜಿ. ನವೀನ್ ಕುಮಾರ್, ಮಳಮಾಚನಹಳ್ಳಿ ಗ್ರಾಮಸ್ಥರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-16-380683851

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.