ಶಿವಮೊಗ್ಗ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯು ಗ್ರಾಮೀಣ ಭಾಗದ ಯುವಕ–ಯುವತಿ ಯರಿಗಾಗಿ 12 ದಿನಗಳ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಕುರಿತು ಉಚಿತ ತರಬೇತಿ ಆಯೋಜಿಸಿದೆ.

ಈ ತರಬೇತಿಯು ಜೂನ್ 12ರಿಂದ ಪ್ರಾರಂಭವಾಗಲಿದೆ. 18ರಿಂದ 45 ವರ್ಷದೊಳಗಿನ ರಾಜ್ಯದ ಯಾವುದೇ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ಆಯ್ಕೆಯಾದವರಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯವನ್ನು ಸಂಸ್ಥೆಯಿಂದಲೇ ಒದಗಿಸಲಾಗುತ್ತದೆ.

ತರಬೇತಿ ಪೂರ್ಣಗೊಂಡ ನಂತರ ಅಭ್ಯರ್ಥಿಗಳು ಸ್ವಂತ ಉದ್ಯೋಗ ಪ್ರಾರಂಭಿಸಲು ಬ್ಯಾಂಕ್ಗಳ ಮೂಲಕ ಸಾಲ ಸೌಲಭ್ಯ ಮತ್ತು ಸೂಕ್ತ ಮಾರ್ಗದರ್ಶನ ನೀಡಲಾಗುತ್ತದೆ. ತರಬೇತಿ ಅವಧಿಯಲ್ಲಿ ಹೈನುಗಾರಿಕೆಯ ಮೂಲ ಜ್ಞಾನ, ಹಸುಗಳ ಆರೈಕೆ, ಆಹಾರ ನಿರ್ವಹಣೆ, ಹಾಲು ಉತ್ಪಾದನೆ, ಪಶು ಆರೋಗ್ಯ ಸಂರಕ್ಷಣೆ, ಗೋಶಾಲೆ ನಿರ್ವಹಣೆ, ಎರೆಹುಳು ಗೊಬ್ಬರ ತಯಾರಿಕೆ ವಿಧಾನ, ಸಾವಯವ ಕೃಷಿಯ ಮಹತ್ವ, ಗೊಬ್ಬರ ಘಟಕ ಸ್ಥಾಪನೆ ಹಾಗೂ ಸಣ್ಣ ಉದ್ಯಮ ಆರಂಭಿಸುವ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.

ಮೊದಲು ಅರ್ಜಿ ಸಲ್ಲಿಸುವವರಿಗೆ ಆದ್ಯತೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವವರು ಗೂಗಲ್ ಫಾರ್ಮ್ ಲಿಂಕ್ (https://forms.gle/ 5qMgpA1XhR4RaBbk8) ಅಥವಾ CBD RSETI Haliyal ವಾಟ್ಸ್ ಆ್ಯಪ್ ಚಾನೆಲ್ನಲ್ಲಿರುವ ಲಿಂಕ್ ಬಳಸಬಹುದು. ಮಾಹಿತಿಗೆ ಮತ್ತು ಹೆಸರು ನೋಂದಾಯಿಸಲು ಮೊ.ಸಂ.89701 45354/ 9483485489 ಗೆ, ವೆಬ್ಸೈಟ್: www.rsetihaliyal.org ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆ, ವಿದ್ಯಾನಗರ, ಹಳಿಯಾಳ – 581329, ಉತ್ತರ ಕನ್ನಡ ಜಿಲ್ಲೆ ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-42-1429443537

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.