ಸಿರುಗುಪ್ಪ: ಪಶುವೈದ್ಯಾಧಿಕಾರಿ ನಿರ್ಲಕ್ಷ್ಯದಿಂದ ಹಸು ಮೃತಪಟ್ಟಿದ್ದು, ಅದರ ಮಾಲೀಕರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಶರಣಬಸವ ಅವರು ಜಿಲ್ಲಾ ಪಶು ವೈದ್ಯಾಧಿಕಾರಿ ಸದಾಶಿವ ಉಪ್ಪಾರ್ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ತಾಲ್ಲೂಕಿನ ಬಗ್ಗೂರು ಗ್ರಾಮದ ರೈತ ಮಲ್ಕಪ್ಪ ಅವರಿಗೆ ಸೇರಿದ ಹಸು, ಎಮ್ಮೆ, ಕರುವಿಗೆ ಹೀಟ್ ಸ್ಟ್ರೋಕ್ ಆಗಿತ್ತು. ರಾರಾವಿ ಪಶು ವೈದ್ಯಕೀಯ ಆಸ್ಪತ್ರೆಗೆ ಬೀಗ ಹಾಕಿತ್ತು. ಗ್ರಾಮ ಮತ್ತು ತಾಲ್ಲೂಕು ಪಶು ವೈದ್ಯಾಧಿಕಾರಿಗೆ ಕರೆ ಮಾಡಿದರೂ, ಅವರು ಸ್ವೀಕರಿಸಲಿಲ್ಲ. ಸಕಾಲಕ್ಕೆ ಚಿಕಿತ್ಸೆ ಸಿಗದೆ ಹಸು ಮೃತಪಟ್ಟಿತು’ ಎಂದರು.

‘1962 ಸಹಾಯವಾಣಿಗೆ ಕರೆ ಮಾಡಿದರೆ, ವಾಹನ ರಿಪೇರಿ ಇದೆ ಎಂದರು. ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು’ ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-25-1915880788

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.