ತುರುವೇಕೆರೆ: ತಾಲ್ಲೂಕಿನ ಅರೇಮಲ್ಲೇನಹಳ್ಳಿ ರಂಗನಾಥ ಸ್ವಾಮಿ ಬೆಟ್ಟದಲ್ಲಿ ಮಾರ್ಚ್ 30ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ, ಮಿಶ್ರತಳಿ ರಾಸುಗಳ ಹಾಲು ಕರೆಯುವ ಸ್ಪರ್ಧೆ, ಹೆಣ್ಣುಕರು ಪ್ರದರ್ಶನ, ಉಚಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಕರ್ನಾಟಕ ಹಾಲು ಉತ್ಪಾದಕರ ಮಹಾ ಮಂಡಳಿ ನಿಗಮದ ನಿರ್ದೇಶಕ ಸಿ.ವಿ.ಮಹಾಲಿಂಗಯ್ಯ ತಿಳಿಸಿದರು.

ನಂದಿನಿಕ್ಷೀರ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘ, ಜಿಲ್ಲಾ ರೈತರ ಮತ್ತು ಎಂಪಿಸಿಎಸ್ ನೌಕರರ ಮತ್ತು ಸಾಮಾನ್ಯ ಕಲ್ಯಾಣ ಟ್ರಸ್ಟ್ ಮಲ್ಲಸಂದ್ರ, ತುಮಕೂರು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಆದಿಚುಂಚನಗಿರಿ ಆಸ್ಪತ್ರೆ, ಸಿದ್ದಗಂಗಾ ವೈದ್ಯಕೀಯ ಮಹಾವಿದ್ಯಾಲಯ, ಅರೇಮಲ್ಲೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು ಕಾರ್ಯಕ್ರಮದ ಸಹಯೋಗದಿಂದ ನಡೆಯಲಿದೆ ಎಂದರು.

ಸೋಮವಾರ ಬೆಳಗ್ಗೆ 9 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ದಗಂಗಾ ಮಠದ ಗುರುಪರದೇಶೀಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.

ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ, ಗೃಹಸಚಿವ ಡಾ.ಜಿ.ಪರಮೇಶ್ವರ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ. ಶಾಸಕ ಎಂ.ಟಿ.ಕೃಷ್ಣಪ್ಪ ಭಾಗವಹಿಸಲಿದ್ದಾರೆ.

ತುಮುಲ್ ಅಧ್ಯಕ್ಷ ಎಚ್.ವಿ.ವೆಂಕಟೇಶ್ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಮಾಡಲಿದ್ದಾರೆ. ಕರ್ನಾಟಕ ಹಾಲು ಉತ್ಪಾದಕರ ಮಹಾ ಮಂಡಳಿ ನಿಗಮದ ನಿರ್ದೇಶಕ ಸಿ.ವಿ.ಮಹಾಲಿಂಗಯ್ಯ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಶಾಸಕ ಮಸಾಲ ಜಯರಾಮ್ ವಿಮಾ ಚೆಕ್ ವಿತರಿಸಲಿದ್ದಾರೆ. ಮಾಜಿ ವಿಧಾನ ಪರಿಷತ್ ಸದಸ್ಯ ಬೆಮೆಲ್ ಕಾಂತರಾಜ್ ವಿದ್ಯಾರ್ಥಿ ವೇತನ ಚೆಕ್ ವಿತರಿಸಲಿದ್ದಾರೆ.

ಸೋಮವಾರ ಬೆಳಗ್ಗೆ 9 ಗಂಟೆಯಿಂದ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ನಡೆಯಲಿದೆ. ನಂತರ ತಾಲ್ಲೂಕು ಮಟ್ಟದ ಹಸುಗಳ ಅಧಿಕ ಹಾಲು ಕರೆಯುವ ಸ್ಪರ್ಧೆ, ತಾಲ್ಲೂಕು ಮಟ್ಟದ ಮಿಶ್ರತಳಿ ಕರುಗಳ ಪ್ರದರ್ಶನದಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ ₹30 ಸಾವಿರ, ದ್ವಿತೀಯ ಬಹುಮಾನ ₹20 ಸಾವಿರ ಮತ್ತು ₹10 ಸಾವಿರ ತೃತೀಯ ಬಹುಮಾನ ನೀಡಲಾಗುವುದು.

ಅರೇಮಲ್ಲೇನಹಳ್ಳಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಎ.ಬಿ.ಜಗದೀಶ್, ನಂದಿನಿ ಕ್ಷೀರ ಭವನದ ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-17-1755316583

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.