ಉಡುಪಿ: ಕಾಲುಬಾಯಿ ರೋಗವು ಜಾನುವಾರುಗಳಲ್ಲಿ ಅತ್ಯಂತ ವೇಗವಾಗಿ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, ಈ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಒಂಬತ್ತನೇ ಸುತ್ತಿನ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ರೈತರು ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹೇಳಿದರು.ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದೇ 22 ರ ವರೆಗೆ ಲಸಿಕಾ ಕಾರ್ಯಕ್ರಮ ನಡೆಯಲಿದೆ ಎಂದರು.

ಜಾನುವಾರುಗಳಿಗೆ ಈ ರೋಗ ಬಂದರೆ ಹಾಲಿನ ಉತ್ಪಾದನೆ ಕುಂಠಿತವಾಗುವುದರೊಂದಿಗೆ ಅವುಗಳ ಆರೋಗ್ಯ ಹದಗೆಡುತ್ತದೆ. ಲಸಿಕಾ ಕಾರ್ಯಕ್ಕಾಗಿ ಮನೆ ಮನೆಗೆ ಭೇಟಿ ನೀಡುವ ಪಶುವೈದ್ಯರು, ತಾಂತ್ರಿಕ ಸಿಬ್ಬಂದಿ, ಕೆ.ಎಂ.ಎಫ್ ಸಿಬ್ಬಂದಿಗೆ ಸಹಕಾರ ನೀಡಬೇಕು ಎಂದು ಹೇಳಿದರು.ಎಂಟನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮದಲ್ಲಿ ಜಿಲ್ಲೆಯ 2,00,518 ಜಾನುವಾರುಗಳ ಗುರಿ ನಿಗದಿಪಡಿಸಿ, 1,92,434 ಜಾನುವಾರುಗಳಿಗೆ ಲಸಿಕೆ ಹಾಕಿಸಿ ಶೇ 96 ರಷ್ಟು ಪ್ರಗತಿ ಸಾಧಿಸಲಾಗಿದೆ. ಒಂಬತ್ತನೇ ಸುತ್ತಿಗೆ 1,96,905 ಗುರಿ ನಿಗದಿಪಡಿಸಿದ್ದು, ಈವರೆಗೆ 68,840 ಜಾನುವಾರುಗಳಿಗೆ ಲಸಿಕೆ ಹಾಕುವುದರೊಂದಿಗೆ ಶೇ 34.96 ರಷ್ಟು ಗುರಿ ಸಾಧಿಸಲಾಗಿದೆ. ಲಸಿಕಾ ಕಾರ್ಯವು ಶೇ 100ರಷ್ಟು ಪ್ರಗತಿಯಾಗಬೇಕು ಎಂದರು.ಲಸಿಕಾ ಕಾರ್ಯಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 2,16,643 ಡೋಸ್ ಲಸಿಕೆಗಳು ಲಭ್ಯವಿದೆ. ಲಸಿಕಾ ಕಾರ್ಯದ ಸಂದರ್ಭದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯಗಳನ್ನು ನಿಯಮಾನುಸಾರ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂದು ಹೇಳಿದರು. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ, ಪಶುವೈದ್ಯಕೀಯ ಪಾಲಿ ಕ್ಲಿನಿಕ್ ಉಪನಿರ್ದೇಶಕ ಡಾ. ಬಾಬಣ್ಣ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-28-1691904020

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.