ಆಲಮಟ್ಟಿ: ನಿಡಗುಂದಿ ತಾಲ್ಲೂಕಿನಲ್ಲಿ 9ನೇ ಸುತ್ತಿನ ಕಾಲುಬಾಯಿ ರೋಗದ ಉಚಿತ ಲಸಿಕಾ ಅಭಿಯಾನವನ್ನು ಏ.23ರಿಂದ ಮೇ 22ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಾದ ವೆಂಕಟೇಶ ವಂದಾಲ ತಿಳಿಸಿದ್ದಾರೆ.

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಹಮ್ಮಿಕೊಂಡಿರುವ ಅಭಿಯಾನದಲ್ಲಿ ರೈತರು ಭಾಗವಹಿಸಿ ಜಾನುವಾರುಗಳಿಗೆ ಕಾಲುಬಾಯಿ ರೋಗದ ಲಸಿಕೆ ಹಾಕಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

ಕಾಲುಬಾಯಿ ರೋಗವು ಎತ್ತು, ಹೋರಿ, ಹಸು ಹಾಗೂ ಎಮ್ಮೆಗಳಲ್ಲಿ ಉಂಟಾದರೆ ಆರ್ಥಿಕ ನಷ್ಟ ಉಂಟಾಗುತ್ತದೆ. ರೋಗದಿಂದ ಗುಣಮುಖವಾದ ಜಾನುವಾರುಗಳಿಗೆ ಗರ್ಭ ಕಟ್ಟುವಿಕೆಯಲ್ಲಿ ವಿಳಂಬವಾಗುತ್ತದೆ. ಜೊತೆಗೆ ಹಾಲಿನ ಇಳುವರಿ ಕಡಿಮೆಯಾಗುವ ಸಾಧ್ಯತೆ ಇದೆ. ಮೂರು ತಿಂಗಳ ಮೇಲ್ಪಟ್ಟ ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕುವುದು ಅಗತ್ಯವಿದೆ. ಈ ಕಾಲುಬಾಯಿ ಲಸಿಕೆಯನ್ನು ವರ್ಷಕ್ಕೆ ಎರಡು ಬಾರಿ ಹಾಕಲಾಗುತ್ತದೆ ಎಂದು ತಿಳಿಸಿದ್ದಾರೆ.

‘ಒಂದು ತಿಂಗಳು ನಡೆಯುವ ಈ ಅಭಿಯಾನದಲ್ಲಿ ಬೆಳಿಗ್ಗೆ 7 ಗಂಟೆಯಿಂದ 10ರ ವರೆಗೆ ಪಶುಗಳಿಗೆ ಲಸಿಕೆ ಹಾಕಲಾಗುತ್ತದೆ. ಒಟ್ಟು 8,502 ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ತಾಲ್ಲೂಕಿನಲ್ಲಿ ಕಾಲುಬಾಯಿ ಜ್ವರಕ್ಕೆ ಲಸಿಕೆ ನೀಡುವ ತಂಡ ರಚಿಸಲಾಗಿದೆ’ ಎಂದು ಮುಖ್ಯ ಪಶುವೈದ್ಯಾಧಿಕಾರಿ ಡಾ.ಸಂಜೀವಕುಮಾರ ಲಾಳಸಂಗಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-26-1741385529

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.