ವಿಜಯಪುರ: ‘ಜಾನುವಾರುಗಳ ಅನಧಿಕೃತ ಸಾಗಣೆಯಾಗದಂತೆ ಜಿಲ್ಲೆಯಾ ದ್ಯಂತ ಚೆಕ್ಪೋಸ್ಟ್ಗಳಲ್ಲಿ ಅಧಿಕಾರಿಗಳು ತೀವ್ರ ನಿಗಾವಹಿಸಬೇಕು’ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಗೌಡ ಹಟ್ಟಿ ಹೇಳಿದರು.

ಬಕ್ರೀದ್ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಸಹಯೋಗದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

‘ಜಾನುವಾರು ಖರೀದಿ ಹಾಗೂ ಮಾರಾಟದ ವೇಳೆ ಅವುಗಳಿಗೆ ಕಿವಿಯೋಲೆ ಇರುವುದು, ಸಾಗಣೆಗೆ ಸಂಬಂಧಪಟ್ಟಂತೆ ಸಂಬಂಧಪಟ್ಟ ಅಧಿಕಾರಿಗಳಿಂದ ಧೃಡೀಕರಣ ಪತ್ರ ಕಡ್ಡಾಯವಾಗಿದೆ. ಎಲ್ಲ ಜಾನುವಾರುಗಳ ಮಾಲೀಕರಿಗೆ ಮನವೊಲಿಸಿ ಕಿವಿಯೋಲೆ ಹಾಕುವ ಪ್ರಕ್ರಿಯೆ ಜಾರಿಯಲ್ಲಿದೆ’ ಎಂದರು.

‘ಬಕ್ರೀದ್ ಮುನ್ನಾ ದಿನವಾದ ಮೇ 27 ಹಾಗೂ ಮೇ 28ರಂದು ಜಾನುವಾರುಗಳ ಅಕ್ರಮ ವಧೆ ಹಾಗೂ ಸಾಗಣೆ ತಡೆಗಟ್ಟಲು ನಗರ ಪಾಲಿಕೆ, ಪಶುಪಾಲನಾ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳ ತಂಡ ರಚಿಸಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಕೊಳ್ಳಬೇಕು. ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಆಯುಕ್ತರು ತಂಡಗಳನ್ನು ರಚಿಸಿ ಅದರ ಮೇಲುಸ್ತುವಾರಿ ವಹಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಔದ್ರಾಮ್ ಮಾತನಾಡಿ, ‘ತಿಡಗುಂದಿ ಟೋಲ್ ಗೇಟ್, ಧೂಳಖೇಡ, ಸೋಲಾಪುರ ನಾಕಾ ಹಾಗೂ ಜಮಖಂಡಿ ನಾಕಾಗಳಲ್ಲಿ ಹೆಚ್ಚುವರಿ ತಂಡಗಳನ್ನು ರಚಿಸಬೇಕು. ಒಂದು ವೇಳೆ ವಶಪಡಿಸಿಕೊಂಡ ಗೋವುಗಳನ್ನು ತಕ್ಷಣ ಹತ್ತಿರದ ಗೋಶಾಲೆಗಳಿಗೆ ಹಸ್ತಾಂತರಿಸಲು ಕ್ರಮ ವಹಿಸಬೇಕು’ ಎಂದು ಸೂಚಿಸಿದರು.

ಬಕ್ರೀದ್ ಸಂದರ್ಭದಲ್ಲಿ ಯಾವುದೇ ರೀತಿಯ ಕಾಯ್ದೆ ಉಲ್ಲಂಘನೆಆಗದಂತೆ, ಯಾವುದೇ ಸಮಸ್ಯೆಗಳಾಗದಂತೆ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಭಾರ ಉಪ ನಿರ್ದೇಶಕ ಡಾ. ಪ್ರಲ್ಹಾದ ಪಾಟೀಲ, ಮುಖ್ಯ ಪಶು ವೈದ್ಯಾಧಿಕಾರಿ ಡಾ. ಸುಜಾತಾ, ಡಾ. ಶಿವಾನಂದ ಮೇಟಿ, ಡಾ. ಯು.ಜೆ. ನಾಲಾ, ಡಾ. ಬಿ.ಎಸ್. ಕನಮಡಿ, ಡಾ. ವೆಂಕಟೇಶ ವಾಲಿಕಾರ, ಡಾ. ಶರಣಗೌಡ ಬಿರಾದಾರ, ಡಾ. ಧರಮಪ್ಪ ರಾಠೋಡ, ಡಾ. ತಜಪಶೆಟ್ಟಿ, ಡಾ. ರಾಮು ರಾಠೋಡ, ಡಾ. ಹಿರೇಮಠ, ಡಾ. ಪ್ರವೀಣ ಸುರಪುರ ಸಭೆಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-26-2048429261

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.