ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕಣಿಯನಪುರ ಕಾಲೋನಿಯ ಮಹದೇಶ್ವರ ದೇವಸ್ಥಾನ ಬಳಿಯ ಕೆರೆಯಲ್ಲಿ ಸೀಳು ನಾಯಿಗಳ ಗುಂಪು ಬಿರು ಬಿಸಿಲಿನಲ್ಲಿ ಮೈ ತಣಿಸಿಕೊಂಡ ದೃಶ್ಯವನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಕಾಲೋನಿಯ ಕೆರೆಯಲ್ಲಿ ಆಗಾಗ್ಗೆ ಸೀಳು ನಾಯಿಗಳ ಗುಂಪು ಗ್ರಾಮಸ್ಥರಿಗೆ ಕಾಣಿಸಿಕೊಳ್ಳುತ್ತಿವೆ. ಕೆಲ ದಿನಗಳ ಹಿಂದಷ್ಟೇ ನೀರು ಕುಡಿಯುತ್ತಿದ್ದ ಜಿಂಕೆಯನ್ನು ಬೇಟೆಯಾಡಿ ಭಕ್ಷಿಸಿದ್ದ ಸೀಳು ನಾಯಿಗಳು ಪ್ರತಿನಿತ್ಯ ಮಧ್ಯಾಹ್ನದ ವೇಳೆಗೆ ಕೆರೆಯ ಬಳಿ ಜಮಾಯಿಸುತ್ತವೆ ಎನ್ನುತ್ತಾರೆ ಗ್ರಾಮಸ್ಥರು.

ಇತ್ತೀಚಿಗೆ ಸುರಿದ ಮಳೆಯಿಂದ ಬಂಡೀಪುರ ಕಾನನವು ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದು, ಸಫಾರಿಗೆ ತೆರಳಿದ ಪ್ರವಾಸಿಗರಿಗೆ ಹುಲಿ, ಚಿರತೆ, ಕರಡಿ, ಆನೆಗಳು ದರ್ಶನ ನೀಡುತ್ತಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-37-70122723

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.