ನರಸಿಂಹರಾಜಪುರ: ಕಡಹಿನಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಕ್ರಿಹಳ್ಳ ಏತನೀರಾವರಿ ವ್ಯಾಪ್ತಿಯ ಭದ್ರಾ ಹಿನ್ನೀರು ಪ್ರದೇಶದಲ್ಲಿ ಭಾನುವಾರ 22 ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದೆ.

ಪ್ರಸ್ತುತ ಭದ್ರಾ ಹಿನ್ನೀರು ಕಡಿಮೆಯಾಗಿರುವುದರಿಂದ ಭದ್ರಾ ಅಭಯಾರಣ್ಯದಿಂದ ಬಂದಿರುವ ಕಾಡಾನೆಗಳು, ಹಳೇಮಂಡಗದ್ದೆ ಸಂಪರ್ಕ ಸೇತುವೆಯ ಬಳಿಬಂದು ಅಲ್ಲಿ ಬೆಳೆದಿರುವ ಭತ್ತದ ಬೆಳೆ ತಿಂದು ಸೂಸಲವಾನಿ ಗ್ರಾಮದ ಹಿನ್ನೀರು ಪ್ರದೇಶಕ್ಕೆ ಹೋಗಿವೆ. ಅರಣ್ಯ ಸಿಬ್ಬಂದಿ ಮತ್ತು ಗ್ರಾಮಸ್ಥರು ಸೇರಿಕೊಂಡು ಕಾಡಾನೆಗಳನ್ನು ಓಡಿಸುವ ಕಾರ್ಯ ಮಾಡಿದ್ದಾರೆ. ಇದುವರೆಗೆ ಕಾಡಂಚಿನ ಪ್ರದೇಶಗಳ ಗ್ರಾಮಗಳ ವ್ಯಾಪ್ತಿಯಲ್ಲಿ ಕಂಡು ಬರುತ್ತಿದ್ದ ಕಾಡಾನೆಗಳು, ಇದೀಗ ಪಟ್ಟಣಕ್ಕೆ ಒಂದೆರಡು ಕಿ.ಮೀ ದೂರದಲ್ಲಿ ಬಂದಿವೆ. ಇನ್ನೂ ಸ್ವಲ್ಪ ದಿನಗಳು ಕಳೆದರೆ ಪಟ್ಟಣಕ್ಕೂ ಬರುವ ಸಾಧ್ಯತೆಯಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದರು.

ಭದ್ರಾ ಹಿನ್ನೀರು ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ 22 ಕಾಡಾನೆಗಳು ಕಂಡು ಬಂದಿದ್ದು, ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಲಾಗಿತ್ತು. ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಯವರು ಸೇರಿ ಅರಣ್ಯಕ್ಕೆ ಕಾಡಾನೆಗಳನ್ನು ಓಡಿಸಲಾಯಿತು ಎಂದು ಬಾಳೆಕೊಪ್ಪ ನಿವಾಸಿ ರೈತ ಕೆ.ಕೆ.ಸುನಿ ಮಾಹಿತಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-126-271949262

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.