ಬೆಂಗಳೂರು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಸೋಮವಾರದಿಂದ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ ಹಾಗೂ ಹಾವೇರಿ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಸೋಮವಾರ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ರಾಜ್ಯದ ಹಲವೆಡೆ ಭಾರಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ.

ದಕ್ಷಿಣ ಒಳನಾಡಿನ ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಶಿವಮೊಗ್ಗ, ಬಳ್ಳಾರಿ, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಯ ಕೆಲ ಸ್ಥಳಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ವಿಜಯಪುರ, ಬೀದರ್, ಯಾದಗಿರಿ, ರಾಯಚೂರು ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜೂನ್ 3ರಿಂದ ಉತ್ತರ ಕನ್ನಡ ಹೊರತುಪಡಿಸಿ ಉಳಿದೆರಡು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-51-1077694657

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.