ರಾಂಪುರ: 2024-25 ನೇ ಸಾಲಿನ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತಿರಸ್ಕೃತ ಅರ್ಜಿಗಳಿಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.

ಬಾಗಲಕೋಟೆ ತಾಲ್ಲೂಕಿನ ಮುಂಗಾರು ಹಂಗಾಮಿನ 507 ಮತ್ತು ಹಿಂಗಾರು ಹಂಗಾಮಿನ 49 ಸೇರಿ ಒಟ್ಟು 556 ಪ್ರಸ್ತಾವನೆಗಳು ವಿಮಾ ಸಂಸ್ಥೆಯಿಂದ ತಿರಸ್ಕೃತವಾಗಿದ್ದು, ಈ ಮಾಹಿತಿಯನ್ನು ಬಾಗಲಕೋಟೆಯ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಕಚೇರಿ ಹಾಗೂ ರೈತ ಸಂಪರ್ಕ ಕೇಂದ್ರಗಳ ಸೂಚನಾ ಫಲಕಗಳ ಮೇಲೆ ಅಳವಡಿಸಲಾಗಿದೆ.

ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಮರು ಪರಿಶೀಲನೆಗೆ ರೈತರು 15 ದಿನಗಳ ಒಳಗಾಗಿ ಬೆಳೆ ವಿಮೆಗೆ ನೋಂದಣಿಯಾಗಿರುವ ಬೆಳೆಯನ್ನು ಬೆಳೆದಿರುವ ಕುರಿತು ಅಗತ್ಯ ದಾಖಲಾತಿಯೊಂದಿಗೆ ಆಕ್ಷೇಪಣೆಯನ್ನು ಸಲ್ಲಿಸಲು ಕೋರಲಾಗಿದೆ.

ಆಕ್ಷೇಪಣೆ ಸಲ್ಲಿಸಲು 2024-25ನೇ ಸಾಲಿನ ಪಹಣಿ ಪತ್ರಿಕೆಯಲ್ಲಿ ವಿಮೆಗೆ ನೋಂದಾಯಿಸಿದ ಬೆಳೆ ನಮೂದಾಗಿರಬೇಕು. ಬೆಂಬಲ ಬೆಲೆ ಪ್ರಯೋಜನೆ ಪಡೆದಿದ್ದಲ್ಲಿ, ರಶೀದಿ ನೀಡಬೇಕು. ವಿಮೆಗೆ ನೋಂದಾಯಿತ ಬೆಳೆಯ ಉತ್ಪನ್ನವನ್ನು ಎಪಿಎಂಸಿ ಮಾರುಕಟ್ಟೆಗೆ ಮಾರಾಟ ಮಾಡದಿದ್ದಲ್ಲಿ ರಶೀದಿ ಒಳಗೊಂಡು ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ಮತ್ತು ತೋಟಗಾರಿಕೆ ಇಲಾಖೆಯಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಬಾಗಲಕೋಟೆಯ ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-19-109811748

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.